ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು ಆರು ತಿಂಗಳ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹುಬ್ಬಳ್ಳಿ ಧಾರವಾಡ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಇದನ್ನು ತಡೆಗಟ್ಟದಿದ್ದರೆ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.