ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಇನ್ನು ಟಿಕೆಟ್ ಇಲ್ಲ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲ ಎಂದ್ರು ಶೆಟ್ಟರ್.
ಮೂತ್ರಪಿಂಡ ಕಸಿ ಮಾಡುವ ಮೂಲಕ ಸಾಕಷ್ಟು ಜನಮನ್ನಣೆ ಪಡೆಯುತ್ತಿರುವ ಕಿಮ್ಸ್ ಈಗ ಹೊಂದಾಣಿಕೆಯಾಗದ ರಕ್ತದ ಗುಂಪಿನ ಮೂತ್ರಪಿಂಡ ಕಸಿ ಮಾಡುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ. ಈ ಕಾರ್ಯದಿಂದ ಕುಟುಂಬವೊಂದಕ್ಕೆ ಪುನರ್ ಜನ್ಮ ನೀಡಿದಂತಾಗಿದೆ.
ಸರ್ಕಾರದ ವಿರುದ್ಧ ಸಿದ್ದು ಭ್ರಷ್ಟಾಚಾರದ ಆರೋಪ ವಿಚಾರ. ʻಸಿದ್ದರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕುತ್ತಿದ್ದಾರೆʼ. ಸಿದ್ದರಾಮಯ್ಯ ಹೇಳಿರೋ ಸುಳ್ಳು ಒಂದೊಂದಾಗಿ ಹೊರಬರ್ತಿದೆ ಎಂದು ಹುಬ್ಬಳ್ಳಿ ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.
ಭದ್ರಾ ಜಮೀನು ಖರೀದಿ ಪ್ರಯತ್ನ ನಿಲ್ಲಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಹುಬ್ಬಳ್ಳಿಯಲ್ಲಿ SPS ಮುಖ್ಯಸ್ಥ ಎಸ್.ಆರ್.ಹಿರೇಮಠ ಎಚ್ಚರಿಕೆ ನೀಡಿದ್ದಾರೆ. 4,430 ಎಕರೆ ಜಮೀನನ್ನು ಹೆಚ್ಚಿನ ಬೆಲೆಗೆ ಖರೀದಿಸುವ ಪ್ರಯತ್ನ ನಡೆಸಲಾಗಿದೆ. ಸರ್ಕಾರ ಕೂಡಲೇ ಖರೀದಿ ಪ್ರಕ್ರಿಯೆ ನಿಲ್ಲಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ.ಒಂದೆಡೆ ರಾಜ್ಯ ನಾಯಕರು ವಾಗ್ಯುದ್ಧಲ್ಲಿ ತೊಡಗಿದ್ರೆ, ಇತ್ತ ದೆಹಲಿ ನಾಯಕರೂ ಕೂಡಾ ಚುನಾವಣೆ ಕಹಳೆ ಉದಿದ್ದಾರೆ.ಇದೇ ತಿಂಗಳು ರಾಜ್ಯಕ್ಕೆ ಮೋದಿ ಎರಡು ಸಾರಿ ಬಂದು ಹೋಗಿದ್ದಾರೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಬೃಹತ್ ಶೋ ಮಾಡಿದ್ದ ಮೋದಿ ಚುನಾಚಣೆ ಕಹಳೆ ಮೊಳಗಿಸಿದ್ರು, ಇದೀಗ ಮೋದಿ ಬೆನ್ನಲ್ಲೆ ಬಿಜೆಪಿ ಚುನಾವಣಾ ಚಾಣಕ್ಯ ಹುಬ್ಬಳ್ಳಿ ಎಂಟ್ರಿ ಆಗ್ತೀದಾರೆ. ಅಮಿತ್ ಶಾ ಕೂಡಾ ಭರ್ಜರಿ ರೋಡ್ ಶೋ ಮಾಡಲಿದ್ದಾರೆ. ಒಂದೇ ತಿಂಗಳಲ್ಲಿ ಬಿಜೆಪಿಯ ಇಬ್ಬರು ಮಾಸ್ ಲೀಡರ್ ಗಳು ಹುಬ್ಬಳ್ಳಿಗೆ ಬರುತ್ತಿರೋದು ಬಿಜೆಪಿಯಲ್ಲಿ ರಣೋತ್ಸಾಹ ಹೆಚ್ಚಿಸಿದೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಹುಬ್ಬಳ್ಳಿಯ ಈದ್ಗಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.. ನಾಳೆ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ಬಿಗಿ ಭದ್ರತೆ ಮಾಡಲಾಗಿದೆ.. ಪ್ರತಿ ವರ್ಷದಂತೆ ಈದ್ಗಾದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ..
ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಆ ಇಲಾಖೆ ಎಲ್ಲರ ಮನೆಗೆ ಹಾಗೂ ಸಂಘ ಸಂಸ್ಥೆಗಳಿಗೆ ಬೆಳಕಾಗಿರುವ ಇಲಾಖೆ. ಎಲ್ಲರಿಗೂ ಬೆಳಕಾಗಿರುವ ಇಲಾಖೆ ಸರ್ಕಾರಿ ಹಾಗೂ ಅರೆ ಸರ್ಕಾರಿ ಸ್ವಾಮ್ಯದಿಂದ ಕತ್ತಲು ಆವರಿಸುವಂತಾಗಿದೆ. ಹಾಗಿದ್ದರೇ ಅಲ್ಲಿ ಆಗಿದ್ದಾದರೂ ಏನು...? ಆ ಇಲಾಖೆ ಆದರೂ ಯಾವುದು ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೇಲ್ಸ್..
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.
ಅವಳಿನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದರು. ಯುವಜನೋತ್ಸವದ ಮೊದಲ ದಿನ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆಸಿ ನಾರಾಯಣಗೌಡ ದೀಪ ಬೆಳಗಿಸಿ ಚಾಲನೆ ನೀಡಿದರು.
ಇಂದು ಅವಳಿ ನಗರದಲ್ಲಿ ರಂಗೇರಲಿದೆ ಯುವ ಜನೋತ್ಸವ. ದೇಶದ ಉದ್ದಗದಿಂದ ಹರಿದು ಬಂದಿದೆ ಯುವ ಜನತೆ. ಯುವಜನೋತ್ಸವಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ. ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ 27 ಗಣ್ಯರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.