26ನೇ ಯುವ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಇಂದು ಪಿಎಂ ಮೋದಿಯವರಿಂದ ಜನೋತ್ಸವ ಉದ್ಘಾಟನೆ. ಕಾರ್ಯಕ್ರಮಕ್ಕೆ ಭಾರೀ ಬಿಗಿ ಭದ್ರತೆ ಒದಗಿಸಿದ ಪೊಲೀಸ್. ಹುಬ್ಬಳ್ಳಿಯಲ್ಲಿ 2900 ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ. ಭದ್ರತೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ಯುವಜನೋತ್ಸವದ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಎಲ್ಲೆಡೆಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ಮೋದಿಗೆ ಅಭಿಮಾನಿಯೊಬ್ಬ ವಿಶೇಷ ಸ್ವಾಗತ ಕೋರಲು ಮುಂದಾಗಿದ್ದಾನೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ರಂಗೋಲಿಯಲ್ಲಿ ನರೇಂದ್ರ ಮೋದಿಯವರ ಚಿತ್ರ ಬಿಡಿಸುವ ಮೂಲಕ ಕಲಾವಿದ ದಿನೇಶ್ ಚಿಲ್ಲಾಳ ತನ್ನ ಕೈಚಳಕವನ್ನು ಪ್ರದರ್ಶನ ಮಾಡಿದ್ದಾನೆ.
National youth festival 2023 : ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ. ನೆಹರು ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಹೆಚ್.ಕೆ. ಪಾಟೀಲ್ ತಡರಾತ್ರಿ ಸಿದ್ಧತೆ ಪರಿಶೀಲಿಸಿದ್ದಾರೆ.
DK Shivakumar : ಎಲ್ಲ ಪಕ್ಷದರಿಗೂ,ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳು. ಎಲ್ಲ ಪಾರ್ಟಿಯವರಿಗೆ ಒಳ್ಳೆದಾಗಲಿ,ಅಧಿಕಾರ ಮಾತ್ರ ನಮಗೆ ಸಿಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ಅಧಿಕಾರದ ಆಸೆ ಬಿಚ್ಚಿಟ್ಟಿದ್ದಾರೆ.
ನಗರದ ಹೊಸೂರು ಸರ್ಕಲ್ ಬಳಿಯಲ್ಲಿ ನಡೆಯುತ್ತಿರುವ ಪ್ಲೈ ಓವರ್ ಕಾಮಗಾರಿಯ ವೇಳೆಯಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ಯುವಕನ ಬಲಗಡೆಯ ಎದೆ ಭಾಗಕ್ಕೆ ಸಿಲುಕಿಕೊಂಡಿದೆ. ಗಾಯಾಳುವನ್ನು ಕೊಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂದು ಗುರುತಿಸಲಾಗಿದ್ದು, ಯುವಕ ಗಂಭೀರವಾದ ಗಾಯವಾಗಿದೆ.
DBoss : ರಾಜ್ಯದಲ್ಲಿ ನಟ ದರ್ಶನ ನಟನೆಯ ಕ್ರಾಂತಿ ಅಬ್ಬರ ಜೋರಾಗಿದೆ. ಹುಬ್ಬಳ್ಳಿಯಲ್ಲಿ ನಿನ್ನೆ ಅದ್ದೂರಿಯಾಗಿ ಪುಪ್ಪಾವತಿ ಸಾಂಗ್ ರಿಲೀಸ್ ಮಾಡಲಾಗಿದೆ. ಅಲ್ಲದೆ ಗಜ ತನ್ನ ಅಭಿಯಾನಿಗಳಿಗೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜನವರಿ 12 ರಿಂದ ಜನವರಿ 16 ರವರೆಗೆ ಧಾರವಾಡ- ಹುಬ್ಬಳ್ಳಿ ಮಹಾನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ರಾಷ್ಟ್ರೀಯ ಯುವಜನೋತ್ಸವ ಆಯೋಜಸಲಿದ್ದು, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಯುವಜನೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗರಿಕತೆ ಬೆಳೆಯುತ್ತಿದ್ದು, ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.