ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ 2013ರಲ್ಲಿ ಜಾರಿಗೆ ಬಂದು ಇದೀಗ ಹತ್ತು ವರ್ಷ ಪೂರೈಸಿದ್ದು, ಕಳೆದ ಒಂದು ದಶಕದಲ್ಲಿ ಪ್ರದೇಶದಲ್ಲಿ ಮೂಲಸೌಕರ್ಯ ಬಲವರ್ದನೆಗೆ 8,520 ಕೋಟಿ ರೂ. ಖರ್ಚು ಮಾಡಲಾಗಿದೆ. ಇದಲ್ಲದೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸ್ಥಳೀಯರಿಗೆ ಭರಪೂರ ಮೀಸಲಾತಿ ಸೌಲಭ್ಯ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 206.57 ಕೋಟಿ ರೂ. ಮತ್ತು ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 242.21 ಕೋಟಿ ರೂ. ಸೇರಿದಂತೆ ಒಟ್ಟು 448.78 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಕಲಬುರಗಿ ನಗರದ ಡಿ.ಎ.ಅರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕದಲ್ಲಿ ಖಾಲಿಯಿರುವ 26,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಶಿಕ್ಷಕರು, ವೈದ್ಯರು, ಸುಮಾರು 40 ಸಾವಿರ ಜನರಿದ್ದಾರೆ. ನಮ್ಮ ಅವಧಿಯಲ್ಲಿಯೇ 70 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.