ಐಎಎಸ್ ಅಧಿಕಾರಿ ಟೀನಾ ದಾಬಿಯವರ ಪತಿ ಪ್ರದೀಪ್ ಗಾವಂಡೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಗೆ ಸೇರಿದವರು. ಈ ಜೋಡಿಯ ನಡುವೆ 13 ವರ್ಷಗಳ ವಯಸ್ಸಿನ ಅಂತರವಿದೆ. ಪ್ರದೀಪ್ ಗಾವಂಡೆ ದೆಹಲಿಯಲ್ಲಿ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಟೀನಾ 2015ನೇ ಬ್ಯಾಚ್ನ UPSC ಟಾಪರ್ ಆಗಿದ್ದರು.
ಟೀನಾ ದಾಬಿ ದೇಶದಲ್ಲಿ ಹೆಚ್ಚು ಪ್ರಸಿದ್ಧರಾಗಿರುವ ಐಎಎಸ್ಗಳಲ್ಲಿ ಒಬ್ಬರು. ಅವರು ತಮ್ಮ ಹೊಸ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರ ಹೊಸ ಲುಕ್ ನೋಡಿದ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಐಎಎಸ್ ಅಧಿಕಾರಿ ಅಥರ್ ಅಮೀರ್ ಖಾನ್ ಅವರು ಟೀನಾ ದಾಬಿಯಿಂದ ವಿಚ್ಛೇದನದ ನಂತರ ಮೆಹ್ರೀನ್ ಖಾಜಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಟೀನಾ ದಾಬಿ ಕೂಡ ರಾಜಸ್ಥಾನ ಪುರಾತತ್ವ ಇಲಾಖೆಯ ನಿರ್ದೇಶಕ ಪ್ರದೀಪ್ ಗವಾಂಡೆ ಅವರನ್ನು ಇತ್ತೀಚೆಗಷ್ಟೇ ವಿವಾಹವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.