ಈದ್ಗಾ ಮೈದಾನದಲ್ಲಿ ನಾಳೆ ನೆರವೇರಲಿರುವ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಕಲಸಿದ್ಧತೆಗಳನ್ನ ಕೈಗೊಂಡಿರೋ ಹಿಂದೂ ಸಂಘಟನೆಗಳು ಈಗಾಗಲೇ ಮೈದಾನದಲ್ಲಿ ವೇಳೆ ಶೇಷ ಪೂಜೆ ಸಲ್ಲಿಸುವ ಮೂಲಕ ಮಂಟಪ ನಿರ್ಮಾಣ ಕಾರ್ಯಗಳನ್ನ ಭರದಿಂದ ನಡೆಸಿವೆ.
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಬಿಜೆಪಿ ಅಹೋರಾತ್ರಿ ಧರಣಿ ಹಿನ್ನೆಲೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಪಾಲಿಕೆ ಅವಕಾಶ ನೀಡಿದ ಬೆನ್ನಲ್ಲೇ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಈದ್ಗಾದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇರುವ ಪಾಲಿಕೆ ದ್ರೋಹ ಮಾಡಿದೆ. ಅತ್ಯಂತ ನೀಚ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ರು.
ಹಿಂದೂಸ್ಥಾನದಲ್ಲಿ ಗಣಪತಿ ಪ್ರತಿಷ್ಠಾಪನಿಗೆ ಪರ್ಮಿಷನ್ ಕೇಳ್ಬೇಕಾ.? ಇದು ಹಿಂದೂಸ್ಥಾನ, ಪಾಕಿಸ್ತಾನವಲ್ಲವೆಂದು ಯತ್ನಾಳ್ ಗುಡುಗಿದ್ದಾರೆ. ಗಣಪತಿ ಉತ್ಸವದಲ್ಲೇ ಡಿಜೆ ಬಳಕೆ ಮಾಡುತ್ತೇವೆ. ನೀವು ಏನ್ ಮಾಡುತ್ತೀರಿ ಮಾಡಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ ಅವಕಾಶ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್, ಹಿಂದೂಗಳ ಭಾವನೆಗಳಿಗೂ ಗೌರವ ಕೊಡಬೇಕು. ತೀರ್ಪನ್ನು ಕೋರ್ಟ್ ಪುನರ್ ಪರಿಶೀಲಿಸಲಿ ಎಂದು ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಈದ್ಗಾ ಗ್ರೌಂಡ್ಗೆ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಇಲಾಖೆ ಅಧಿಕಾರಿಗಳ ಮಹತ್ವದ ಮೀಟಿಂಗ್ ನಡೆಯಲಿದೆ. ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈದ್ಗಾ ಮೈದಾನದ ಬಳಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸದ್ಯಕ್ಕಂತೂ ಬಗೆಹರಿಯೋ ಲಕ್ಷಣ ಕಾಣ್ತಿಲ್ಲ.. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಕೂಡಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈದ್ಗಾ ಮೈದಾನ ವಿಚಾರ ಯಾಕೋ ತಣ್ಣಗಾಗುವ ಲಕ್ಷಣ ಕಾಣಿಸ್ತಿಲ್ಲ. ಬದಲಾಗಿ ಈದ್ಗಾ ವಿವಾದದ ಕಿಚ್ಚು ಮತ್ತಷ್ಟು ರಾಜಿಕೊಳ್ತಿದೆ.ಮೈದಾನದ ಜಟಾಪಟಿ ಬಂದ್ ವರೆಗೂ ಬಂದು ತಲುಪಿದೆ. ಇದೇ 12ಕ್ಕೆ ಚಾಮರಾಜಪೇಟೆಯನ್ನ ಸಂಪೂರ್ಣ ಬಂದ್ ಮಾಡಲು ಕ್ಷೇತ್ರದ ಜನ ನಿರ್ಧರಿಸಿದ್ದು, ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರವಾಗ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.