ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ.
ನೈಋತ್ಯ ಮಾನ್ಸೂನ್ ತನ್ನ ಸಾಮಾನ್ಯ ದಿನಾಂಕವಾದ ಜೂನ್ 1 ಕ್ಕಿಂತ ಮೂರು ದಿನಗಳ ಮುಂಚಿತವಾಗಿ ಕೇರಳದಲ್ಲಿ ಆರಂಭವಾಗಿರುವುದನ್ನು ಭಾರತೀಯ ಹವಾಮಾನ ಇಲಾಖೆ ಖಚಿತಪಡಿಸಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯಲ್ಲಿ ನೈರುತ್ಯ ಮಾನ್ಸೂನ್ ಮಹತ್ವದ ಪಾತ್ರವನ್ನು ವಹಿಸುತ್ತದೆ.
Monsoon 2022 - ವಾಯುವ್ಯ ಭಾರತದಾದ್ಯಂತ ಇರುವ ರಾಜ್ಯಗಳಲ್ಲಿ ತಾಪಮಾನದಲ್ಲಿ ಭಾರಿ ಏರಿಕೆಯಾಗಿದ್ದು, ಬಾರ್ಮರನಲ್ಲಿ 47.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷ ದೇಶದಲ್ಲಿಯೇ ದಾಖಲಾದ ಅತ್ಯಧಿಕ ತಾಪಮಾನವಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇದರ ನಡುವೆ ಹವಾಮಾನ ಇಲಾಖೆ ಮತ್ತೊಮ್ಮೆ ಮುನ್ಸೂಚನೆ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾತ್ರಿ ಇನ್ನಷ್ಟು ವರುಣನ ನರ್ತನ ಇರಲಿದೆ ಎಂದು ಮಾಹಿತಿ ನೀಡಲಾಗಿದೆ. ನಿನ್ನೆ ರಾತ್ರಿ 12ಸೆ.ಮೀ ಮಳೆಯಾಗಿತ್ತು. ಇಂದು ಸಂಜೆ ಬಳಿಕ ಶುರುವಾಗಲಿರುವ ಮಳೆ ಸರಿ ಸುಮಾರು 14ಸೆ.ಮೀ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರಾದ ಪ್ರಸಾದ್ ಮಾಹಿತಿ ನೀಡಿದ್ದಾರೆ.
Weather Report Today: ಪ್ರಸ್ತುತ ವಾಯುವ್ಯ ಭಾರತದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ (South Westerly Winds) ತನ್ನ ಪರಿಣಾಮವನ್ನು ತೋರಿಸಲಿದೆ ಎಂದು ಹವಾಮಾನ ಇಲಾಖೆ (Indian Meteorological Department)ಮುನ್ಸೂಚನೆ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಸಿಲಿನ ಬೇಗೆಯಿಂದ ಪರಿಹಾರ ಸಿಗುವ ನಿರೀಕ್ಷೆ ಇದ್ದು, ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ (IMD) ಹೇಳಿದೆ.
Summer Temperature - ಮುಂದಿನ 4 ರಿಂದ 5 ದಿನಗಳಲ್ಲಿ ಬಿಸಿಗಾಳಿ ಬೀಸುವ (Heat Wave) ಸಾಧ್ಯತೆ ಇದೆ. ಸದ್ಯಕ್ಕೆ ಮಳೆಯಾಗುವ ಲಕ್ಷಣಗಳು ಇಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಸದ್ಯಕ್ಕೆ ಹವಾಮಾನ ಶುಷ್ಕತೆಯಿಂದ ಕೂಡಿರಲಿದೆ.
Cyclone Asani: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಈ ಕಾರಣದಿಂದಾಗಿ, ಅಸಾನಿ ಚಂಡಮಾರುತ ಅಪ್ಪಳಿಸುವ ಎಲ್ಲಾ ಸಾಧ್ಯತೆಗಳು ಇದೆ ಎಂದು IMD ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಡಮಾನ್ ಮತ್ತು ನಿಕೋಬಾರ್ ನ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.
Asani Updates - ಚಂಡಮಾರುತದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಗೃಹ ಸಚಿವಾಲಯವು (Home Ministry) ಹೆಚ್ಚುವರಿ ರಕ್ಷಣಾ ತಂಡಗಳನ್ನು ಅಲರ್ಟ್ನಲ್ಲಿ ಇರಿಸಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಸೋಮವಾರದಂದು ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು ಶೇ 2-3 °ರಷ್ಟು ಡಿಗ್ರಿ ಸೆಲ್ಸಿಯಸ್ ಏರಲಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.