ಹೇಮಂತ್ ಸೊರೆನ್ ಅವರು ಮತ್ತೊಮ್ಮೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ರಾಂಚಿಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟ ಹಲವು ನಾಯಕರು ಭಾಗವಹಿಸಬಹುದು ಎಂದು ಸೋಮವಾರ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
Lok Sabha Election Results 2024: ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಿನ್ನೆ INDIA ಮೈತ್ರಿಕೂಟದ ಸಮಾವೇಶ ನಡೀತು.. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಭಾಗಿಯಾಗಿದ್ದರು..
ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂದಿಯವರ ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ವಿರೋಧ ಪಕ್ಷವಾದ ಇಂಡಿಯಾ ಬಣಕ್ಕೆ ಹಲವಾರು ಆಯ್ಕೆಗಳಿವೆ, ಆದರೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಒಂದೇ ಒಂದು ಆಯ್ಕೆ ಇದೆ ಎಂದು ಹೇಳಿದ್ದಾರೆ. ಗುರುವಾರದಿಂದ ಆರಂಭವಾಗಲಿರುವ ಎರಡು ದಿನಗಳ ಭಾರತ ಸಮಾವೇಶದ ಸ್ಥಳವಾದ ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
INDIA Update: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮದಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವುದಕ್ಕೆ ಶುಕ್ರವಾರ ಐ.ಎನ್.ಡಿ.ಐ.ಎ ಬ್ಲಾಕ್ ನ ಫ್ಲೋರ್ ಲೀಡರ್ಗಳ ಸಭೆಯಲ್ಲಿ ಕೆಲವು ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.