ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಏಕದಿನದ ಕ್ರಿಕೆಟ್ ಪಂದ್ಯದಲ್ಲಿ ಅತಿ ಕಡಿಮೆ ಇನ್ನಿಂಗ್ಸ್ ನಲ್ಲಿ 11 ಸಾವಿರ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ಪಾಕ್ ವಿರುದ್ಧ ಪಂದ್ಯದಲ್ಲಿ 222 ಇನ್ನಿಂಗ್ಸ್ ನಲ್ಲಿ 11 ಸಾವಿರ ರನ್ ಗಳ ಗಡಿ ತಲುಪುವ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಆಟಗಾರ ಎನ್ನುವ ಶ್ರೇಯಕ್ಕೆ ಪಾತ್ರರಾದರು.
ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಭಾರತ ಭರ್ಜರಿ ಆರಂಭ ಕಂಡಿದೆ. ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಅವರ ಆಟದಿಂದಾಗಿ 136 ರನ್ ಗಳ ಜೊತೆಯಾಟ ತಂಡದ ರನ್ ಗತಿಯನ್ನು ಹೆಚ್ಚುವಂತೆ ಮಾಡಿತು.
ಭಾನುವಾರ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ನಡೆಯಲಿರುವ ವಿಶ್ವಕಪ್ 2019 ರ ಲೀಗ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎದುರಾಗಲಿವೆ. ಈ ಹಿನ್ನಲೆಯಲ್ಲಿ ಪಾಕ್ ನ ಮಾಜಿ ಆಟಗಾರ ವಾಸಿಂ ಅಕ್ರಂ ಎರಡು ದೇಶಗಳ ಅಭಿಮಾನಿಗಳು ಶಾಂತಿಯಿಂದ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಎಂ.ಎಸ್.ಧೋನಿ ತಮ್ಮ ನಡೆಯಿಂದಲೇ ಜಗತ್ತಿನ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಈಗ ಪಾಕ್ ವಿರುದ್ಧದ ಪಂದ್ಯದಲ್ಲಿ ಧೋನಿ ಕಾರಣಕ್ಕಾಗಿ ಪಾಕ್ ಅಭಿಮಾನಿಯೊಬ್ಬ ಭಾರತ ತಂಡಕ್ಕೆ ಬೆಂಬಲ ನೀಡುತ್ತಿದ್ದಾನೆ.
2018ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ನಡುವೆ ಈ ಪಂದ್ಯಾವಳಿಯ ಮೊದಲ ಪಂದ್ಯ ಸೆಪ್ಟೆಂಬರ್ 15 ರಂದು ನಡೆಯಲಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡವು ಗೆಲುವಿನ ನಿರೀಕ್ಷೆ ಇದೆ, ಆದರೆ ದೇಶದ ಅಂಧ ಕ್ರಿಕೆಟಿಗರು ದೇಶಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಭಾರತ ಆಟಗಾರರು ಬ್ಲೈಂಡ್ ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ, ಕೊಹ್ಲಿಯನ್ನು ಪಾಕಿಸ್ತಾನದ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫ್ರಜ್ ಅಹ್ಮದ್, ವೇಗದ ಬೌಲರ್ ಮೊಹಮ್ಮದ್ ಅಮೀರ್ ಮತ್ತು ಬ್ಯಾಟ್ಸ್ಮನ್ ಅಹ್ಮದ್ ಶೆಹಜಾದ್ ಅವರೊಂದಿಗೆ ಹೋಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.