ಈ ದಂಪತಿಯು ಕೆನಡಾದ ಪೌರತ್ವವನ್ನು ಹೊಂದಿದ್ದಾರೆ. ಚನನ್ ಖೇರಾ ಗ್ರಾಮದ ಕುಲ್ವಿಂದರ್ ಸಿಂಗ್ ಮತ್ತು ಪತ್ನಿ ಕರಮ್ಜಿತ್ ಕೌರ್ ದಂಪತಿ ಗಡಿ ಪ್ರದೇಶದಲ್ಲಿ ತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಗೆ ಎನ್ಆರ್ಐಗಳ ಮೇಲೆ ಕೇಂದ್ರವು ವಿಧಿಸಿರುವ ನಿರ್ಬಂಧಗಳ ಬಗ್ಗೆ ತಿಳಿದಿರಲಿಲ್ಲ. ಹೀಗಾಗಿ ಆ ಪ್ರದೇಶದಲ್ಲಿ ತಿರುಗುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, ಆಗಸ್ಟ್ 2019 ರಿಂದ ಇದುವರೆಗೆ 84 ಬಾರಿ ಪಾಕ್ ಮೂಲಕದ ಭಯೋತ್ಪಾದಕರು ಅಕ್ರಮವಾಗಿ ಭಾರತದ ಗಡಿ ನುಸುಳಲು ಯತ್ನಿಸಿದ್ದು, ಒಟ್ಟು 59 ಭಯೋತ್ಪಾದಕರು ಭಾರತದ ಗಡಿಯೊಳಗೆ ನುಸುಳಿದ್ದಾರೆ .
ಗುಪ್ತಚರ ಬ್ಯೂರೋದ ಮಾಹಿತಿಯ ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕರ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ತಡೆಯಲು ಸಮುದ್ರ ಮತ್ತು ಗಡಿ ಪ್ರದೇಶಗಳಲ್ಲಿ ಹದ್ದಿನ ಕಣ್ಗಾವಲನ್ನು ಇರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.