ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Ishwar Khandre: ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸಚಿವರು ಸೂಚಿಸಿದರು.
ಪಿಓಪಿ ಮತ್ತು ರಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ತೊರೆ, ಬಾವಿಗಳಲ್ಲಿ ವಿಸರ್ಜನೆ ಮಾಡಿದರೆ, ನೀರಿನಲ್ಲಿ ಸೀಸ, ನಿಕ್ಕಲ್, ಕ್ರೋಮಿಯಂನಂತಹ ಭಾರ ಲೋಹಗಳು ಕರಗುತ್ತವೆ. ಜೊತೆಗೆ ಪಿಓಪಿ ಕರಗದೆ ಹಾಗೆಯೇ ಉಳಿದು ಜಲಚರಗಳ ಸಾವಿಗೆ ಕಾರಣವಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಹೆಚ್. ಕೆ. ಪಾಟೀಲ್, ಕೃಷ್ಣೆ ಬೈರೇಗೌಡ, ಚೆಲುವ ನಾರಾಯಣ ಸ್ವಾಮಿ, ಕೆ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ಬಿ ತಿಮ್ಮಾಪುರ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಾಂಕಾಳ್ ವೈದ್ಯ, ರಹೀಮ್ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಬೋಸರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಎಂ. ಸಿ. ಸುಧಾಕರ್, SS ಮಲ್ಲಿಕಾರ್ಜುನ, ಬಿ ನಾಗೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.