ಕರೋನವೈರಸ್ ಲಸಿಕೆಗಳ ಮೇಲೆ ವಾಗ್ದಾಳಿ ನಡೆಸಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಫಿಜರ್-ಬಯೋಟೆಕ್ ಅಭಿವೃದ್ಧಿಪಡಿಸಿದ ಲಸಿಕೆ ಜನರನ್ನು ಮೊಸಳೆಗಳು ಅಥವಾ ಗಡ್ಡದ ಹೆಂಗಸರನ್ನಾಗಿ ಮಾಡಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಕರೋನಾ ಸೋಂಕಿಗೆ ಒಳಗಾಗಿದ್ದರೂ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಚಿಂತನೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಕರೋನಾ ಲಸಿಕೆ ಬ್ರೆಜಿಲ್ಗೆ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಬ್ರೆಜಿಲ್ ರಾಷ್ಟ್ರಪತಿ ಜೆಯರ್ ಬೋಲ್ಸೆನಾರೋ, ಪತ್ರಕರ್ತರಿಗೆ ಸಂಬಂಧಿಸಿದಂತೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪತ್ರಕರ್ತರು ತೀರಾ ಅಶಕ್ತರಾಗಿರುವ ಕಾರಣ ಅವರು ಕೊರೊನಾ ವೈರಸ್ ದಾಳಿಗೆ ಗುರಿಯಾಗಿ ಸಾವನ್ನಪ್ಪುವ ಸಾಧ್ಯತೆ ಹೆಚ್ಚಾಗಿದೆ ಎಂದು ಸೋಮವಾರ ಹಿಡಿಶಾಪ ಹಾಕಿದ್ದಾರೆ.
ಬ್ರೆಜಿಲ್ನಲ್ಲಿ 2 ಲಕ್ಷಕ್ಕೂ ಹೆಚ್ಚು ಕರೋನಾ ಪ್ರಕರಣಗಳು ವರದಿಯಾಗಿವೆ ಮತ್ತು 14,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಬಿಕ್ಕಟ್ಟನ್ನು ಎದುರಿಸಲು ದೇಶಕ್ಕೆ ಸಾಧ್ಯವಾಗುತ್ತಿಲ್ಲ. ಏತನ್ಮಧ್ಯೆ ಬ್ರೆಜಿಲ್ ಆರೋಗ್ಯ ಸಚಿವ ನೆಲ್ಸನ್ ಟೀಶ್ ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.