ವಿಶ್ವದ ಅತ್ಯಂತ ಸಂಪೂರ್ಣ ವೇಗದ ಬೌಲರ್ ವಿಷಯಕ್ಕೆ ಬಂದರೆ, ನಿಸ್ಸಂದೇಹವಾಗಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ.ಈಗಾಗಲೇ ಅವರು ಹ್ಯಾಟ್ರಿಕ್ ವಿಕೆಟ್ ತೆಗೆದಿರುವುದಾಗಲಿ ಅಥವಾ ವೇಗವಾಗಿ ಐವತ್ತು ಟೆಸ್ಟ್ ವಿಕೆಟ್ ಗಳನ್ನು ಪಡೆದಿರುವುದರಲ್ಲಿ ಇರ್ಫಾನ್ ಪಠಾನ್ ಹಾಗೂ ಹರ್ಭಜನ್ ಸಿಂಗ್ ಜೊತೆ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ವೈಯಕ್ತಿಕ ಕಾರಣಗಳಿಂದಾಗಿ ರಜೆಗೆ ತೆರಳಿದ್ದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಈಗ ಸಂಜನಾ ಗಣೇಶನ್ ಎನ್ನುವವರನ್ನು ಮದುವೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮುಂಬರುವ ನಾಲ್ಕನೇ ಟೆಸ್ಟ್ ಪಂದ್ಯದಕ್ಕೂ ಮುಂಚಿತವಾಗಿ ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದಾಗಿ ಭಾರತ ತಂಡದಿಂದ ಹೊರಬಂದರು.ಈಗ ಅವರದ್ದು ಮದುವೆ ಇರುವುದರಿಂದಾಗಿ ಕೆಲವು ದಿನಗಳ ರಜೆ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಮಾರ್ಚ್ 4 ರಿಂದ ಅಹಮದಾಬಾದ್ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಮುಖಾಮುಖಿಗಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತೀಯ ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.
ICC ODI Ranking 2021 - ಐಸಿಸಿ (International Cricket Council) ಏಕದಿನ ಬ್ಯಾಟ್ಸ್ಮನ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದ ಹಿರಿಯ ಆಟಗಾರ ರೋಹಿತ್ ಶರ್ಮಾ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.
India vs Australia : ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಟೀಮ್ ಇಂಡಿಯಾಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ನಂತರ ಭಾರತೀಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಗಳನ್ನು ಕಬಳಿಸಿ ಬೌಲಿಂಗ್ ಮೂಲಕ ಮಿಂಚಿದ ಜಸ್ಪ್ರಿತ್ ಬುಮ್ರಾ ಏಕಾಏಕಿ ಮೂರನೇ ಕ್ರಮಾಂಕದಲ್ಲಿ ರಾತ್ರಿ ಕಾವಲುಗಾರನಾಗಿ ಕಣಕ್ಕೆ ಇಳಿದಿದ್ದು, ಒಂದು ಕ್ಷಣ ಎಲ್ಲರಲ್ಲಿಯೂ ಅಚ್ಚರಿ ಮೂಡಿದೆ.
ಅಡಿಲೇಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಮೊದಲ ಇನಿಂಗ್ಸ್ ನಲ್ಲಿ ಕೇವಲ 244 ರನ್ ಗಳಿಗೆ ಸರ್ವಪತನವನ್ನು ಕಂಡಿತು.
ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಯಜುವೇಂದ್ರ ಚಾಹಲ್ ಪ್ರಮುಖ ಸಾಧನೆ ಮಾಡಿದ್ದಾರೆ. ಹೌದು, ಟಿ 20 ಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಷಯದಲ್ಲಿ ಚಾಹಲ್, ಬುಮ್ರಾ ಅವರನ್ನು ಸರಿಗಟ್ಟಿದ್ದಾರೆ.
ಐಪಿಎಲ್ನಲ್ಲಿ ಜಸ್ಪ್ರಿತ್ ಬುಮ್ರಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ ನ್ಯೂಜಿಲೆಂಡ್ನ ಮಾಜಿ ಆಟಗಾರ ಮತ್ತು ಬೌಲಿಂಗ್ ತರಬೇತುದಾರ ಮುಂಬೈ ಇಂಡಿಯನ್ಸ್ನ ಶೇನ್ ಬಾಂಡ್ ಅವರನ್ನು ವಿಶ್ವದ ಅತ್ಯುತ್ತಮ ವೇಗದ ಬೌಲರ್ ಎಂದು ಹೇಳಿದರು.
ಆಸ್ಟ್ರೇಲಿಯಾದ ಶೇನ್ ವಾಟ್ಸನ್ ಶ್ರೇಷ್ಠ ಆಲ್ ರೌಂಡರ್ ಗಳಲ್ಲಿ ಒಬ್ಬರು, 2016 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರೂ ಸಹಿತ ಫ್ರ್ಯಾಂಚೈಸ್ ಕ್ರಿಕೆಟ್ ಆಡುವುದನ್ನು ಮುಂದುವರೆಸಿದ್ದಾರೆ.
ಇಂದು ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದಾರೆ, ಪಂದ್ಯದ ಮೊದಲು ಟ್ರೆಂಟ್ ಬೌಲ್ಟ್ ಈ ಪಂದ್ಯದಲ್ಲಿ ಹಿಂದಿರುಗಲಿದ್ದಾರೆ ಎಂದು ಜಸ್ಪ್ರೀತ್ ಬುಮ್ರಾ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.