ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.
‘ಪಠಾಣ್’ ಚಿತ್ರದ ದೊಡ್ಡ ಯಶಸ್ಸಿನ ನಂತರ ಶಾರುಖ್ ಖಾನ್, ‘ಜವಾನ್’ ಎಂಬ ಇನ್ನೊಂದು ಆಕ್ಷನ್ ಪ್ಯಾಕ್ಡ್ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ ‘ಜವಾನ್’ ಚಿತ್ರವನ್ನು ತಮಿಳಿನಲ್ಲಿ ಮಾಸ್ ಚಿತ್ರಗಳಿಗೆ ಹೆಸರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಜನ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟು, ಬಹಳ ಕುತೂಹಲದಿಂದ ಕಾಯುತ್ತಿರುವ ಈ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ, ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯ ಪೋಸ್ಟರ್ ಬಿಡುಗಡೆಯಾಗಿದೆ.
ಒಂದ್ಕಡೆ ಶಾರುಕ್ ಖಾನ್ ನಟನೆ 'ಪಠಾಣ್' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಮತ್ತೊಂದ್ಕಡೆ ಕಿಂಗ್ ಖಾನ್ ಮುಂದಿನ ಸಿನಿಮಾ 'ಜವಾನ್' ಕುರಿತು ದಿನಕ್ಕೊಂದು ಗುಸುಗುಸು ಕೇಳಿಬರ್ತಿದೆ. ಅಟ್ಲಿ ನಿರ್ದೇಶನದ ಈ ಸಿನಿಮಾ ಶೂಟಿಂಗ್ ಭರದಿಂದ ಸಾಗ್ತಿದೆ. ಇತ್ತೀಚೆಗೆ ಈ ಆಕ್ಷನ್ ಎಂಟರ್ಟೈನರ್ ಚಿತ್ರದಲ್ಲಿ ಅಲ್ಲು ಅರ್ಜುನ್ ನಟಿಸ್ತಾರೆ ಎನ್ನಲಾಗಿತ್ತು. ಈಗ ಶಿವಣ್ಣನ ಹೆಸರು ಕೇಳಿಬರ್ತಿದೆ.
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರು ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅವರ ಮುಂಬರುವ ಚಿತ್ರ ಪಠಾನ್ನೊಂದಿಗೆ ಮತ್ತೊಮ್ಮೆ ಆನ್-ಸ್ಕ್ರೀನ್ ಮ್ಯಾಜಿಕ್ ಮಾಡಲು ಸಿದ್ಧರಾಗಿದ್ದಾರೆ. ಶಾರುಖ್ ಖಾನ್ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಫ್ಯಾನ್ಗಳಿಂದ ಕಿಂಗ್ ಖಾನ್ ಅಂತ ಶಾರುಖ್ ಕರೆಸಿಕೊಳ್ಳುತ್ತಾರೆ. ಇದೀಗ ಬಾದ್ ಶಾಗೆ ಪ್ಯಾನ್ ಒಬ್ಬ ಕಿಸ್ ಮಾಡಿರುವ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಹಲವು ಕಾರಣಕ್ಕೆ ಸದ್ದು ಮತ್ತು ಸುದ್ದಿಯಲ್ಲಿರುವ ಸ್ಟಾರ್ ಕಾಂಬಿನೇಷನ್ ವೊಂದು ಇದೀಗ ಅಧಿಕೃತವಾಗಿದೆ.ಅಂದರೆ, ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ತಮಿಳಿನ ಸ್ಟಾರ್ ನಿರ್ದೇಶಕ ಅಟ್ಲಿ, 'ಜವಾನ್' ಸಿನಿಮಾ ಮೂಲಕ ಕೈ ಜೋಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.