ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ, ಪುಲ್ವಾಮಾ ದಾಳಿಯ (Pulwama Attack) ರೂವಾರಿಯಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 4 ಜೆಇಎಂ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿಯ ಜವಾಬ್ದಾರಿ ಹೊತ್ತಿದ್ದ ಜೈಷ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಮುಖಂಡ ಮೌಲಾನಾ ಮಸೂದ್ ಅಜರ್'ನನ್ನು ಪಾಕಿಸ್ತಾನ ಎಂದಿಗೂ ಜೈಲಿನಲ್ಲಿ ಇಟ್ಟುಕೊಂಡಿಲ್ಲ.
ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ದೆಹಲಿ, ರಾಜಸ್ಥಾನ, ಪಂಜಾಬ್, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪಾಕ್ ಅಧಿಕಾರಿಗಳು ಅಭಿನಂದನ್ ಅವರನ್ನು ರಾವಲ್ಪಿಂಡಿಯಿಂದ ಲಾಹೋರಿಗೆ ಕರೆತಂದು ಜಿನಿವಾ ಒಪ್ಪಂದದ ನಿಯಮಾವಳಿ ಪ್ರಕಾರ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಗೆ ಒಪ್ಪಿಸಲಿದ್ದಾರೆ ಎನ್ನಲಾಗಿದೆ.
ಕಾಶ್ಮೀರ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಜಪಾನ್ ವಿದೇಶಾಂಗ ಸಚಿವ ಟಾರೋ ಕೊನೊ, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕ್ ಸರ್ಕಾರ ಭಯೋತ್ಪಾದನೆ ನಿಗ್ರಹಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಉಗ್ರ ಮಸೂದ್ ಅಜರ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನ ನಡೆದಿದೆ.
ರಾವಲ್ಪಿಂಡಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಅಜ್ಹರ್ ತವರು ಜಿಲ್ಲೆಯಾಗಿದ್ದು, ಅಜ್ಹರ್ ಪ್ರಸ್ತುತ ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯೊಳಗೆ ರಕ್ಷಣೆ ಪಡೆಯುತ್ತಿದ್ದಾನೆ ಎಂದು ನಂಬಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.