ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶನಿವಾರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಕಳೆದ ನಾಲ್ಕು ದಿನಗಳಲ್ಲಿ ಹತರಾದ ಒಟ್ಟು ಭಯೋತ್ಪಾದಕರ ಸಂಖ್ಯೆ 8 ಕ್ಕೆ ತಲುಪಿದೆ.ಇತ್ತೀಚಿನ ಎನ್ಕೌಂಟರ್ ಪುಲ್ವಾಮಾ ಜಿಲ್ಲೆಯ ಪಹೂ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಯಾವ ದೇಶದಲ್ಲಿ ಕರೋನಾವೈರಸ್ ಸ್ಥಿತಿಗತಿ ಹೇಗಿದೆ ಎಂಬುದನ್ನು ತೋರಿಸಲು WHO ನಕ್ಷೆಯನ್ನು ಪ್ರಕಟಿಸಿದೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಭಾರತದ ನಕ್ಷೆಯಲ್ಲಿ ಪ್ರತ್ಯೇಕವಾಗಿ ತೋರಿಸಲಾಗಿದೆ. ಡಬ್ಲ್ಯುಎಚ್ಒ ಮತ್ತು ಚೀನಾ ನಡುವಿನ ಸಂಬಂಧ ಎಲ್ಲರಿಗೂ ತಿಳಿದಿದೆ, ಅಮೆರಿಕ ಈ ಇಬ್ಬರ ಮೈತ್ರಿಕೂಟವನ್ನು ಬಹಿರಂಗವಾಗಿ ಆಕ್ರಮಣ ಮಾಡಿದೆ. ಆದ್ದರಿಂದ ಚೀನಾದ ಆಜ್ಞೆಯ ಮೇರೆಗೆ ವಿಶ್ವ ಆರೋಗ್ಯ ಸಂಸ್ಥೆ ಭಾರತದ ನಕ್ಷೆಯನ್ನು ಈ ರೀತಿ ಬಿಂಬಿಸಿರಬಹುದೇ ಎಂಬ ಬಗ್ಗೆ ಸಂಶಯ ಮೂಡಿದೆ.
ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರಿಕೆಟ್ ಅಕಾಡೆಮಿ ತೆರೆಯಲು ಮುಂದಾಗಿದ್ದು ಕ್ರಿಕೆಟಿಗರಾಗಲು ಬಯಸುವವರಿಗೆ ವಿಶೇಷವಾಗಿ ದೂರದ ಪ್ರದೇಶಗಳ ಯುವಕರಿಗೆ ತರಬೇತಿ ನೀಡಲು ಬಯಸಿದ್ದಾರೆ ಎಂದು ಅಧಿಕೃತ ವಕ್ತಾರರು ಮಾಹಿತಿ ನೀಡಿದರು.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಸ್ಪಿ ಮಲಿಕ್ ಅವರು ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಪಡಿಸುವ ಬಗ್ಗೆ ಅಥವಾ ವಿರೂಪಗೊಳಿಸುವಿಕೆಯ ಬಗ್ಗೆ ಯಾವುದೇ ಕ್ರಮಗಳನ್ನು ರೂಪಿಸುವುದಿಲ್ಲ ಎಂದು ತಮ್ಮ ಪಕ್ಷಕ್ಕೆ ಭರವಸೆ ನೀಡಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಶನಿವಾರದಂದು ತಿಳಿಸಿದ್ದಾರೆ.
ಭಯೋತ್ಪಾದಕರು ಭಾನುವಾರ ಮತ್ತೊಂದು ಪುಲ್ವಾಮಾ-ಮಾದರಿಯ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ. ಈ ದಾಳಿ ನಡೆಸಲು ಅವರು ಮೋಟಾರು ಬೈಕನ್ನು ಬಳಸಬಹುದೆಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.