ದೇಶದ ಗಮನ ಸೆಳೆದಿದ್ದ ಪ್ರತಿಷ್ಠಿತ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಎಲ್ಲ ಪ್ರಮುಖ ಖಾತೆಗಳನ್ನು ವಶಪಡಿಸಿಕೊಂಡಿದೆ.ಇನ್ನೊಂದೆಡೆಗೆ ಗೆಲುವಿನ ನಿರೀಕ್ಷೆಯನ್ನಿಟ್ಟುಕೊಂಡಿದ್ದ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಭಾರಿ ಮುಖಭಂಗ ಉಂಟಾಗಿದೆ.
ಜೆ.ಎನ್.ಯು ಚುನಾವಣೆ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸದ್ಯ ಬಂದಿರುವ ಮಾಹಿತಿ ಪ್ರಕಾರ ಒಟ್ಟು 5185 ಮತಗಳಲ್ಲಿ 3281 ಮತಗಳ ಎಣಿಕೆ ಮುಗಿದಿದ್ದು. ಎಲ್ಲಾ ವಿಭಾಗಗಳಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಮುನ್ನಡೆಯನ್ನು ಸಾಧಿಸಿದೆ ಎಂದು ತಿಳಿದು ಬಂದಿದೆ.
ಜವಹರಲಾಲ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯ ಮತ ಎಣಿಕೆ ವೇಳೆ ಎಬಿವಿಪಿ ದಾಂದಲೆ ಮಾಡಿದ್ದರಿಂದಾಗಿ ತಾತ್ಕಾಲಿಕವಾಗಿ ಮತ ಎಣಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.