ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒನ್ ಸ್ಟಾಪ್ ಸೆಂಟರ್ ಸಖಿ ಕೇಂದ್ರಕ್ಕೆ ಗೌರವಧನದ ಆಧಾರದ ಮೇಲೆ ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಸಿಬ್ಬಂದಿಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಫಲಿತಾಂಶದ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರ್ಜಾಲ ತಾಣವನ್ನು ವೀಕ್ಷಿಸುವುದು. ಪರೀಕ್ಷಾ ಫಲಿತಾಂಶ ಸಂಬಂಧಿತ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0836-2215261, 2215375 ಹಾಗೂ ಇನ್ನಿತರ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2215349 ಗೆ ಸಂಪರ್ಕಿಸಬಹುದು
ಈ ಖಾಲಿ ಹುದ್ದೆಗಳು ಮಹಿಳೆಯರಿಗೆ ಮಾತ್ರ. ಹಿರಿಯ ಪ್ರಧಾನ ಖಾಸಗಿ ಕಾರ್ಯದರ್ಶಿ, ಪ್ರಧಾನ ಖಾಸಗಿ ಕಾರ್ಯದರ್ಶಿ, ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಜೂನಿಯರ್ ಹಿಂದಿ ಭಾಷಾಂತರಕಾರ ಮತ್ತು ಕೆಳ ವಿಭಾಗದ ಕ್ಲರ್ಕ್ ತಲಾ ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ
ಎನ್.ಸಿ.ಸಿ. ಕ್ಲಿನಿಕ್ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದಲ್ಲಿ ಪ್ರತೀ ತಿಂಗಳ 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕೆಲಸದ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸುವುದು.
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ 31 ರ ವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಡ್ಯ ಉದ್ಯೋಗ ಮೇಳದಲ್ಲಿ ಉದ್ಯೋಗಕ್ಕೆ ವಿವಿಧ ಕಂಪನಿಗಳಿಂದ ಆಯ್ಕೆಯಾದ ಯುವ ಜನರಿಗೆ ನೇರ ನೇಮಕಾತಿ ಪತ್ರಗಳನ್ನು ಕೇಂದ್ರ ಸಚಿವರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರು ಹಸ್ತಾಂತರ ಮಾಡಿದರು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ.ಪದವೀಧರರು ಆಗಸ್ಟ್, 21 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.೦೮೩೯೨-೨೬೬೨೩೯, ಮೊ.೯೯೦೦೫೩೫೬೧೨, ೯೪೪೯೨೧೭೩೨೬ ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಪಶ್ಚಿಮ ವಲಯ ಕುರುಗೋಡು ಕ್ಷೇತ್ರ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ ನೇಮಕಕ್ಕಾಗಿ ಆ.05 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಜರ್ಮನ್ ಸರ್ಕಾರದಿಂದ ಮಾನ್ಯತೆ ಹೊಂದಿದ ಮೆ.ಟ್ಯಾಲೆಂಟ್ ಆರೇಂಜ್ ಸಂಸ್ಥೆ ವತಿಯಿಂದ ಜರ್ಮನಿಯಲ್ಲಿ ನರ್ಸ್ ಆಗಿ ಉದ್ಯೋಗಾವಕಾಶ ಹೊಂದಲು ಅರ್ಹ ಬಿಎಸ್ಸಿ ಅಥವಾ ಜಿಎನ್ಎಂ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ಷಾ ಅಲ್ತಫ್ ಅಹ್ಮದ್ ತಿಳಿಸಿದ್ದಾರೆ.
ಪ್ರಾಥಮಿಕ 1-5 (ಡಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು),ಪ್ರಾಥಮಿಕ 6-8 (ಬಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು) ಮತ್ತು ಪ್ರೌಢ 9-12 (ಬಿ.ಇಡಿ ವಿಶೇಷÀ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು).
By accepting cookies, you agree to the storing of cookies on your device to enhance site navigation, analyze site usage, and assist in our marketing efforts.