ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿ ಇಲಾಖೆಯ ಕಚೇರಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ಉಪಯೋಜನಾ ನಿರ್ದೇಶಕರ ಹುದ್ದೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮಥ್ರ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ದೇಶಿ (ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೆಟರ್ ಹುದ್ದೆಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ(ಹಂತ-4)ಯನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ನಿಮಾನ್ಸ್ ಸಂಸ್ಥೆ ಸಹಯೋಗದೊಂದಿಗೆ ಯುವ ಸ್ಪಂದನ ಕೆಂದ್ರದಲ್ಲಿ ಆರಂಭಿಸಲಾದ “ಯುವ ಪರಿವರ್ತಕರಾಗಿ” ಕಾರ್ಯನಿರ್ವಹಿಸಲು ಅರ್ಹ ಸ್ಥಳೀಯ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಲಬುರಗಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತು ಜೀವನೋಪಾಯ ಇಲಾಖೆಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಕಲಬುರಗಿಯ ಫ್ಲೈಟ್ ಕ್ರೂವ್ ಏವಿಯೇಶನ್ ಅಕಾಡೆಮಿಯಲಿ ಉಚಿತವಾಗಿ ಏರ್ಲೈನ್ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಕೋರ್ಸಿಗೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ವಿವಿಧ ವೃತ್ತಿಗಳಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿಯನ್ನು ನೀಡಲಾಗುತ್ತಿದ್ದು, ಈಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಈ ತರಬೇತಿಯು ಒಂದು ವರ್ಷದ ಅವಧಿಯದ್ದಾಗಿದ್ದು, ಜುಲೈ ಮಾಹೆಯಿಂದ ಅಪ್ರೆಂಟಿಶಿಪ್ ತರಬೇತಿಯು ಆರಂಭವಾಗಲಿದೆ.ಫಿಟ್ಟರ್, ಟರ್ನರ್, ಮಷಿನಿಷ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್ ವೃತ್ತಿಗಳಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.