ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುರುವಾರ ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿ, ಕರ್ನಾಟಕದಲ್ಲಿನ ಹೂಡಿಕೆ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿತು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಾಲ್ಲೂಕಿನ ದದೇಗಲ್ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ವಿವಿಧ ಅಲ್ಪಾವಧಿ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶುಕ್ರವಾರದಂದು ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು 1,600 ಕ್ಕೂ ಹೆಚ್ಚು ಜನರನ್ನು ಲೈನ್ ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡುವುದಾಗಿ ಘೋಷಿಸಿದೆ.ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ 'ಅಸಿಸ್ಟೆಂಟ್ ಲೈನ್ಮ್ಯಾನ್' ಹುದ್ದೆಗೆ 1,690 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ.
ರಾಯಚೂರು: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು 03 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ(ಗುಂಪು)ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ : ತಾಲ್ಲೂಕಿನ ದದೇಗಲ್ನಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಅಡಿಯಲ್ಲಿ ಎಸ್.ಎಸ್.ಎಸಲ್.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಮುಗಿಸಿರುವ ವಿದ್ಯಾರ್ಥಿಗಳಿಗೆ ಟರ್ನರ್, ಮಿಲ್ಲರ್, ಗ್ರಿಂಡರ್, ಸಿಎನ್ಸಿ, ಟೂಲ್ರೂಂ ಮಷಿನಿಷ್ಟ್, ಡಿಸೈನ್ ಸಾಫ್ಟ್ವೇರ್(ಮೆಕ್ಯಾನಿಕಲ್) ಕೋರ್ಸುಗಳಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಅಗರಬತ್ತಿ ತಯಾರಿಕೆ ಮತ್ತು ಅಣಬೆ ಬೇಸಾಯ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಮೇಲ್ವಿಚಾರಣೆಗಾಗಿ ತಾಲೂಕು ಪಂಚಾಯತಿಗಳು ಪ್ರಮುಖ ಪಾತ್ರ ಹೊಂದಿದ್ದು, ತಾಲೂಕು ಪಂಚಾಯತಿಗಳಿಗೆ ಮಂಜೂರಾದ ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಯೋಜನೆಯ ಮೇಲ್ವಿಚಾರಣೆಗೆ ಅಡಚಣೆ ಉಂಟಾಗಿರುತ್ತದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಧಾರವಾಡ ಕೃಷಿ ಮಹಾವಿದ್ಯಾಲಯದ ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಪದವೀಧರ ಸಹಾಯಕರ ತಾತ್ಕಾಲಿಕ ಹುದ್ದೆಗೆ 179 ದಿನಗಳ ಅವಧಿಗೆ ತಾತ್ಕಾಲಿಕವಾಗಿ ತೊಡಗಿಸಿಕೊಳ್ಳಲು ಎಂ.ಎಸ್ಸಿ (ಅಗ್ರೀ) ಸಸ್ಯ ಜೀವರಸಾಯಶಾಸ್ತ್ರ ವಿದ್ಯಾರ್ಹತೆಯನ್ನು ಹೊಂದಿರುವ, ಅರ್ಹ, ಅನುಭವಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Jobs: ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಪೈಕಿ 41,177 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
Koo Latest News: ಮುಂದಿನ ಕೆಲವು ವರ್ಷಗಳಲ್ಲಿ, ನಾವು ಸುಮಾರು 10 ಮಿಲಿಯನ್ ಡೌನ್ಲೋಡ್ ಮಾಡಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ. ಸುಮಾರು 20 ಪಟ್ಟು ಬಳಕೆದಾರರ ಹೆಚ್ಚಳ ಸಾಧ್ಯ ಎಂದು ಕಂಪನಿ ವಿಶ್ವಾಸ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.