ಇನ್ನು ಜೋಗ ಜಲಪಾತ(Jog Falls)ದಲ್ಲಿ 185 ಕೋಟಿ ರೂ. ವೆಚ್ಚದಲ್ಲಿ ರೋಪ್ ವೇ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ. ಅದರಂತೆ ಹಂಪಿ, ಹಳೇಬೀಡು, ಬೇಲೂರು, ಬಾದಾಮಿಯಲ್ಲಿ ಪ್ರವಾಸೋದ್ಯಮದ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ವಿವರಿಸಿದರು.
ವಾರಾಂತ್ಯ ಹಾಗೂ ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ಪ್ರವಾಸಿಗರಿಂದ ಜೋಗ ಜಲಪಾತ ತುಂಬಿ ತುಳುಕುತ್ತಿದೆ. ಶನಿವಾರದಿಂದ ಒಂದೇ ಸಮನೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಜೋಗ ಜಲಪಾತದಲ್ಲಿ ಭಾರೀ ಪ್ರಮಾಣದ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಈ ದೃಶ್ಯವನ್ನು ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರ
ದಂಡೇ ಹರಿದುಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.