ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಇರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅತ್ಯಾಧುನಿಕ ಇ.ವಿ.ಮೊಬಿಲಿಟಿ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಜತೆಯಲ್ಲಿದ್ದರು.
ಸುತ್ತೂರು ಜಾತ್ರಾ ಮಹೋತ್ಸವು ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಈ ಪ್ರದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಸ್ತುಪ್ರದರ್ಶನ, ವಿಚಾರ ಸಂಕೀರ್ಣಗಳು, ಕಾರ್ಯಾಗಾರಗಳು ಸೇರಿದಂತೆ ಜಾತ್ರಾ ಅವಧಿಯಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ.
ಮೈಸೂರಿನ ಜೆಎಸ್ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2022-23ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.