ಕೇಂದ್ರ ಸರ್ಕಾರ ಪಡಿತರ ಚೀಟಿ ಇಲ್ಲದವರಿಗೆ ರೇಷನ್ ನೀಡುವಂತ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು. ನಮ್ಮ ರಾಜ್ಯದಲ್ಲಿ ಇವತ್ತಿನಿಂದ ಪಡಿತರ ಚೀಟಿ ಇಲ್ಲದವರಿಗೆ ರೇಷನ್ ವಿತರಣೆ ಮಾಡುವಂತಹ ಕಾರ್ಯ ಪ್ರಾರಂಭವಾಗಿದೆ.
ಮೆಜೆಸ್ಟಿಕ್ ನಲ್ಲಿ ಇದ್ದ ಸಾವಿರಾರು ವಲಸೆ ಕಾರ್ಮಿಕರ ಹಸಿವು ನೀಗಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಊರಿಗೆ ಹೊರಟಿ ನಿಂತಿರುವ ಬಡ ಕಾರ್ಮಿಕರಿಗೆ ಉಚಿತ ಊಟ, ಬ್ರೆಡ್, ಬಿಸ್ಕೇಟ್, ನೀರನ್ನು ವಿತರಣೆ ಮಾಡಿದ್ದಾರೆ.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ 1,88,512 ಕುಟುಂಬ ವರ್ಗಕ್ಕೂ ಮೂರು ತಿಂಗಳು ಉಚಿತ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಎಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ 61,233 ಫಲಾನುಭವಿಗಳಿಗೂ ಪ್ರತಿ ಕೆಜಿಗೆ ರೂ.15ರಂತೆ 10 ಕೆಜಿ ಅಕ್ಕಿ ವಿತರಿಲಾಗುತ್ತದೆ.
ರಾಜ್ಯದಲ್ಲಿ 1.88 ಲಕ್ಷ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಮುಖ್ಯ ಮಂತ್ರಿಯವರ ಆದೇಶದಂತೆ ಅರ್ಜಿ ಸಲ್ಲಿಸಿದ್ದ ಎಲ್ಲ ಕುಟುಂಬಗಳಿಗೂ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳವರೆಗೆ ಪ್ರತಿ ತಿಂಗಳು 10 ಕೆ.ಜಿ ಉಚಿತ ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ನ್ಯಾಯಬೆಲೆ ಅಂಗಡಿ ಮುಂದೆ ದಾಸ್ತಾನು, ಸೂಚನಾ ಪಟ್ಟಿಯನ್ನ ಖಡ್ಡಾಯವಾಗಿ ಹಾಕಬೇಕು. ತೂಕದಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು, ಪಡಿತರ ಕಾರ್ಡ್ದಾರರಿಂದ ಯಾವುದೇ ರೀತಿ ಹಣ ಸಂಗ್ರಹಿಸಬಾರದು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಕಟ್ಟಅಪ್ಪಣೆ ಮಾಡಿದರು.
ಲಾಕ್ಡೌನ್ನಿಂದಾಗಿ ಗ್ರಾಹಕರಿಗೆ ಏಕಕಾಲದಲ್ಲೇ ಎರಡು ತಿಂಗಳ ಪಡಿತರ ಧಾನ್ಯವನ್ನು ವಿತರಣೆ ಮಾಡಲು ತೀರ್ಮಾನಿಸಲಾಯಿತು. ಅದರಂತೆ ಏ.18ರಂದು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆದು ಆನೇಕಲ್ ತಾಲ್ಲೂಕಿಗೆ ಪಡಿತರ ಧಾನ್ಯಗಳನ್ನು ಮರು ವಿತರಣೆ ಮಾಡಲು ತೀರ್ಮಾನಿಸಲಾಗಿತ್ತು ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 20.58 ಲಕ್ಷ ಎಪಿಎಲ್ ಕಾರ್ಡುದಾರರು ಇದ್ದಾರೆ. ಬಿ.ಪಿ.ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಸಹ ತಿಂಗಳಿಗೆ 10 ಕೆ.ಜಿ ಯಂತೆ 3 ತಿಂಗಳು ಉಚಿತ ಅಕ್ಕಿಯನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ- ಸಚಿವ ಕೆ. ಗೋಪಾಲಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.