ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು.ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ನಿನ್ನೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕಚೇರಿ ಬಳಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ, ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಮಾಡಿದ್ದು ಹಾಗೂ ತನಗೆ ಹಲ್ಲೆ ಮಾಡಿದ್ದರ ಬಗ್ಗೆ ಅಳಲು ತೋಡಿಕೊಂಡಿದ್ದ.
ಈ ಸರ್ಕಾರ ತಮ್ಮ ನಾಯಕರ ಲಂಚ ಹಾಗೂ ಮಂಚದ ಪ್ರಕರಣ ಮುಚ್ಚಿಹಾಕುತ್ತಿದ್ದು, ಬಿಜೆಪಿ ಕಾರ್ಯಕರ್ತನಿಗೆ ನ್ಯಾಯ ಸಿಗುತ್ತಿಲ್ಲ. ಜನ ಸಾಮಾನ್ಯರಿಗೂ ನ್ಯಾಯ ಸಿಗುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಇತ್ತೀಚಿಗೆ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಕೇಳಿ ಆರೋಪ ಬಂದಿರುವ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಇಂದು ಪೇಜಾವರ ಶ್ರೀಗಳು ಭೇಟಿ ನೀಡಿ ಧೈರ್ಯವನ್ನು ತುಂಬಿದ್ದಾರೆ.
ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯಕ್ಕೆ ಕ್ರಿಮಿನಲ್ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪನವರನ್ನ ಸಚಿವ ಸಂಪುಟದಿಂದ ವಜಾ ಮಾಡಲು ರಾಜ್ಯಪಾಲರನ್ನ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಮನವಿ ಮಾಡಿದ್ದೇವೆ.ಸೆಕ್ಷನ್ 306ರಡಿಯಲ್ಲಿ ಈಶ್ವರಪ್ಪನವರನ್ನ ಬಂಧಿಸಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನಗಳು ತರಬೇತಿ
ಭಾನುವಾರದಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ 14 ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಕ್ರಮವನ್ನು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.