ಪಿಎಸ್ಐ ಹಗರಣ ಬೆನ್ನಲ್ಲೆ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಯಲ್ಲಿ ಕಂಡಕ್ಟರ್ ಆಗಲು ಅಭ್ಯರ್ಥಿಗಳು ವಾಮಮಾರ್ಗ ಪತ್ತೆಯಾಗಿ ಸಿಕ್ಕಿ ಬಿದ್ದಿದ್ದಾರೆ.
ಕಲಬುರಗಿ ರೈಲ್ವೆ ನಿಲ್ದಾಣದ ಹೊರಗಡೆಗೆ ಹಸಿರು ಬಣ್ಣ ಬಳಿಯಲಾಗಿದ್ದು, ರೈಲು ನಿಲ್ದಾಣ ಮಸೀದಿ ರೀತಿ ಕಾಣುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿದ್ದು, ಕೂಡಲೇ ಬಣ್ಣ ಬದಲಿಸುವಂತೆ ಒತ್ತಾಯ ಕೇಳಿ ಬಂದಿದೆ..
ಕಲಬುರಗಿ ನಗರದಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ನಗರದ ಫಿರ್ದೋಸ್ ಕಾಲೋನಿಯಲ್ಲಿ ಮನೆ ಬೀಗ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಬಿರುವಿನಲ್ಲಿಟ್ಟಿದ್ದ 50 ಗ್ರಾಂ ಚಿನ್ನಾಭರಣ ಮತ್ತು 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಗೆ ಕಪ್ಪು ಮಸಿ ಬಳಿದ ಪ್ರಕರಣ. ಎಂಇಎಸ್ ಪುಂಡಾಡಿಕೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ. ಕಲಬುರಗಿ ಜಿಲ್ಲೆ ಬಳ್ಳೂರ್ಗಿ ಗ್ರಾಮದಲ್ಲಿ ಮಹಾರಾಷ್ಟ್ರ ಬಸ್ಗೆ ಮಸಿ. ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆಗಳು.
ಮಹಾರಾಷ್ಟ್ರದಲ್ಲಿ ಮುಂದುವರೆದ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ. ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಮಸಿ. ಜೈ ಮಹಾರಾಷ್ಟ್ರ ಅಂತಾ ಬರೆದು ಪುಂಡಾಟಿಕೆ ಮೆರೆದ ಶಿವಸೇನೆ ಕಾರ್ಯಕರ್ತರು.
ಕಲಬುರಗಿ ಜಿಲ್ಲೆಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಿದ್ದು, ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದಾರೆ... ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದರಿಂದ ಅಪಸ್ವರ ಕೇಳಿ ಬರ್ತಿದೆ.. ಇನ್ನೂ ಮುಂದೆಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಅಂತಾ ಬಸವರಾಜ್ ಬೊಮ್ಮಾಯಿ ಹೇಳಿದರು.
ಕಲಬುರಗಿ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದ ಮೇಲೆ ಮತ್ತೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಎಸಗಿದ್ರ ಬಗ್ಗೆ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿತ್ತು. ಈ ಮೂಲಕ ಕಲಬುರಗಿಯಲ್ಲಿ ಬಂಧಿತರ ಸಂಖ್ಯೆ 52ಕ್ಕೆ ಏರಿದೆ.
ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ BQ.1 ತಳಿ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಗಡಿಗಳಲ್ಲಿ ಕೋವಿಡ್ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.