Kannada Book Authority: 2024ರ ಗಣರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನ 704 ಶೀರ್ಷಿಕೆಗಳ ವ್ಯಾಪಕ ಸಂಗ್ರಹದ ಮೇಲೆ ಶೇಕಡ 50% ರಿಯಾಯಿತಿಯನ್ನು ನೀಡಲಿದೆ.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪುಸ್ತಕ ಪ್ರಿಯರು ಇದರ ಸದುಪಯೋಗ ಪಡೆಯಬೇಕೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ ಸಿಂಗ್ ಅವರು ತಿಳಿಸಿದ್ದಾರೆ.
ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.