Shri Ram Jai Hanuman Poster: ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಲಿರುವ "ಶ್ರೀ ರಾಮ್, ಜೈ ಹನುಮಾನ್" ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
Vasishta Simha VIP: ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರವು ಹಾಲಿವುಡ್ ಸ್ಟೈಲ್ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ಮೋಹನ್ ಕುಮಾರ್ "ವಿಐಪಿ" ಚಿತ್ರಕ್ಕೆ ಕಥೆ ಬರೆದಿದ್ದಾರೆ.
ಟೈಟಲ್ ನೋಡಿ ಕನ್ಫೂಸ್ ಆಗ್ಬೇಡಿ..ಬಿಗ್ ಬಾಸ್ ಸೀಸನ್ 10ರಲ್ಲಿ ಅದೆಲ್ಲಿ ಬೆಂಕಿ ಬಂತು ಅಂತಾ ಯೋಚನೆ ಮಾಡಬೇಡಿ..ನಾವು ಹೇಳ್ತಿರೋದು ಬೆಂಕಿಯಂತೆ ಫರ್ಪೆಮೆನ್ಸ್ ಕೊಡ್ತಿರುವ ಬೋಲ್ಡ್ ಬ್ಯೂಟಿ ತನಿಷಾ ಕುಪ್ಪಂಡ ಬಗ್ಗೆ. ಕನ್ನಡ ಬಿಗ್ ಬಾಸ್ ಸೀಸನ್ 10ರ ಪ್ರಬಲ ಸ್ಪರ್ಧಿಯಾಗಿರುವ, ಸಖತ್ ಫೈಟ್ ಕೊಡ್ತಿರುವ ಪೆಂಟಗನ್ ಸುಂದರಿ ಬಗ್ಗೆ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.
ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ "ಜಸ್ಟ್ ಪಾಸ್" ಚಿತ್ರದ ಟೀಸರ್ A2 music ಮೂಲಕ ಬಿಡುಗಡೆಯಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಜನಮನಸೂರೆಗೊಳ್ಳುತ್ತಿದೆ. ಈ ವಿಷಯವನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.
ದಕ್ಷಿಣ ಭಾರತೀಯ ಸಿನಿಮಾದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಅಸುನೀಗಿದ್ದಾರೆ.ಸುಮಾರು 200ಕ್ಕೂ ಸಿನಿಮಾಗಳು, ನಾಟಕಗಳಲ್ಲಿ ನಟಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.
Kannada Actress Leelavati Death: ಸುಮಾರು 6 ದಶಕಗಳ ವೃತ್ತಿಜೀವನದಲ್ಲಿ ಲೀಲಾವತಿ ಅವರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ, ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ವರನಟ ಡಾ.ರಾಜಕುಮಾರ್ ಜೊತೆ 36 ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅವರಿಗೆ ದೊರೆತ ಪ್ರಮುಖ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ ನೋಡಿ.
ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.
ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ.
Electronic City: 2021ರಲ್ಲಿ ಚಿತ್ರೀಕರಣ ಆರಂಭ ಮಾಡಿದೆ. 2022 ರಲ್ಲಿ ಚಿತ್ರ ಸಿದ್ದವಾಯಿತು. ಈವರೆಗೂ ನಲವತ್ತೆರಡಕ್ಕೂ ಅಧಿಕ ಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿರುವ ನಮ್ಮ ಚಿತ್ರ ಮೂವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ವಿವಿಧ ಭಾಗಗಳಲ್ಲಿ ಪಡೆದುಕೊಂಡಿದೆ.
ಸ್ಯಾಂಡಲ್ವುಡ್ನಲ್ಲಿ 'ನಾವಿಕ', 'ಅತಿರಥ', 'ನುಗ್ಗೇಕಾಯಿ', 'ಲೋಕಲ್ ಟ್ರೈನ್', 'ಲಂಕೆ' ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಈ ಬ್ಯೂಟಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. 'ದಿ ವೆಕೆಂಟ್ ಹೌಸ್' ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿರುವ ಅವರು, ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಪ್ರಯತ್ನವೀಗ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ನ.10ರಂದು 'ದಿ ವೆಕೆಂಟ್ ಹೌಸ್' ಚಿತ್ರ ಬಿಡುಗಡೆಯಾಗಲಿದೆ.
ಸ್ಯಾಂಡಲ್ವುಡ್ನಲ್ಲಿ 'ನಾವಿಕ', 'ಅತಿರಥ', 'ನುಗ್ಗೇಕಾಯಿ', 'ಲೋಕಲ್ ಟ್ರೈನ್', 'ಲಂಕೆ' ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಈ ಬ್ಯೂಟಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. 'ದಿ ವೆಕೆಂಟ್ ಹೌಸ್' ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿರುವ ಅವರು, ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಪ್ರಯತ್ನವೀಗ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ನ.10ರಂದು 'ದಿ ವೆಕೆಂಟ್ ಹೌಸ್' ಚಿತ್ರ ಬಿಡುಗಡೆಯಾಗಲಿದೆ.
"ಪರಿಂದ", "1942 ಎ ಲವ್ ಸ್ಟೋರಿ", "ಥ್ರೀ ಇಡಿಯೆಟ್ಸ್" ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ "12th ಫೇಲ್" ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ.
ಹಂಸಲೇಖ ಕಥಾ ಕಣಜದಿಂದ ಸ್ಯಾಂಡಲ್ ವುಡ್ ಪರಿಚಿತರಾದ ರಘು ಕೋವಿ, ಕೃಷ್ಣಲೀಲಾ ಅತ್ಯುತ್ತಮ ಬರವಣಿಗೆಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಾಜೇಂದ್ರ ಸಿಂಗ್ ಬಾಬು, ಎಸ್.ಎಸ್. ರಾಜಶೇಖರ್ , ಕೆ.ವಿ.ರಾಜ್, ಶಶಾಂಕ್, ಉಪೇಂದ್ರ ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ರಘು ಕೋವಿ ದುಡಿದಿದ್ದಾರೆ. ಇದೀಗ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕಿಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.