ಸದ್ಯ ಸಿನಿಮಾದ ಪ್ರಚಾರ ಹಾಗೂ ಬಿಡುಗಡೆಯ ತಯಾರಿಯಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ತಿಂಗಳ ಅಂದ್ರೆ ಜೂನ್ 30 ರಂದೇ ಥಿಯೇಟರ್ ನಲ್ಲಿ ಪ್ರೇಕ್ಷಕರ ಮುಂದೆ ಹಾಜರಾಗಲಿದೆ. ಈ ಸಿನಿಮಾದಲ್ಲಿ ಅನಿತಾ ಎಂಬ ವಿಶೇಷ ಪಾತ್ರದಲ್ಲಿ ನಟಿಸಿರುವ ನಟಿ ಸನಾತನಿ ತಮ್ಮ ಪಾತ್ರದ ಬಗ್ಗೆ ಅನುಭವವನ್ನು ಹಂಚಿಕೊಂಡಿದ್ದಾರೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಚಿಕ್ಕಬಳ್ಳಾಪುರ ಶ್ರೀನಿವಾಸ್.
ಮತೀನ್ ಹುಸೇನ್ ನಾಯಕರಾಗಿ ನಟಿಸಿರುವ `ರೋಡ್ ಕಿಂಗ್’ ಚಿತ್ರದ ಮೂರು ಹಾಡುಗಳು trendsetter productions ಯೂಟ್ಯೂಬ್ ಚಾನಲ್ ನಲ್ಲಿ ಈಗಾಗಲೇ ಬಿಡುಗಡೆಯಾಗಿದ್ದು, ಕಲಾರಸಿಕರ ಮನ ಗೆದ್ದಿದೆ. ಪ್ರಭು ಎಸ್ ಆರ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚಂದನ್ ಶೆಟ್ಟಿ ಮಾಧುರಿ ಹಾಗೂ ವಿಶಾಲ್ ಹಾಡಿದ್ದಾರೆ. ಡಾ||ವಿ.ನಾಗೇಂದ್ರ ಪ್ರಸಾದ್, ಮತೀನ್ ಹುಸೇನ್ ಹಾಗೂ ಸಾಯಿ ನವೀನ್ ಹಾಡುಗಳನ್ನು ಬರೆದಿದ್ದಾರೆ. ಟ್ರೇಲರ್ ಗೂ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಜೂನ್ 23 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Rajan Nagendra Composed Songs: ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು.
Sandalwood News: 120 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶ್ರುತಿ ವಿಷ್ಣುವರ್ಧನ್, ಅಂಬರೀಶ್, ಕಮಲ್ ಹಾಸನ್ ರಂತಹ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ನಟರ ಜೊತೆ ನಟಿಸಿರುವಶೃತಿ ಕೊಟ್ಟ ಪಾತ್ರಕ್ಕೆ ಜೀವ ತುಂಬೋ ಕೆಲಸ ಮಾಡುತ್ತಾರೆ.
ಕನ್ನಡ ಚಿತ್ರರಂಗದ ಮೂಲಕ ಜ್ಯಾತ್ಯಾತೀತ ಸಮಾಜ ನಿರ್ಮಾಣದಲ್ಲಿ ತಮ್ಮದೇ ಆದ ಹೆಜ್ಜೆಯಿಡುತ್ತಿರುವವರು ಮಾಧವಾನಂದ ಯೋಗಪ್ಪ ಶೇಗುಣಸಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದವರು.
ಕೆಜಿಎಫ್ 2 ಸಿನಿಮಾ ಬಿಡುಗಡೆ ಆಗಿ ಒಂದು ವರ್ಷವಾಗುತ್ತಿರುವ ಬೆನ್ನಲ್ಲೆ ಯಶ್ರ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.ಶ್ರೀಲಂಕಾದಲ್ಲಿರುವ ನಟ ಯಶ್ ಅಲ್ಲಿನ ಬೋರ್ಡ್ ಆಫ್ ಇನ್ವೆಸ್ಟ್ಮೆಂಟ್ ಇನ್ ಶ್ರೀಲಂಕಾದ ಮುಖ್ಯಾಧಿಕಾರಿ ದಿನೇಶ್ ವೇರಕ್ಕೋಡಿ ಅವರನ್ನು ಭೇಟಿಯಾಗಿದ್ದು,ಶ್ರೀಲಂಕಾನಲ್ಲಿ ತಮ್ಮ ಸಿನಿಮಾದ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಲು ಅನುಮತಿ ಕೋರಿದ್ದಾರೆ ಎನ್ನಲಾಗಿದೆ.
ಪ್ರತಿಭಾವಂತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ಮಾಡಿರುವ ‘ಆರ’ ಸಿನಿಮಾ ಟೀಸರ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಕ್ಯೂರಿಯಾಸಿಟಿ ಹುಟ್ಟು ಹಾಕಿದ್ದ ಚಿತ್ರತಂಡ ಪ್ರಾಮಿಸಿಂಗ್ ಟೀಸರ್ ಬಿಡುಗಡೆ ಮಾಡಿ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.