B.M.Srikantaiah: ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. ನಂತರದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು, ಮದರಾಸು ವಿಶ್ವವಿದ್ಯಾಲಯದಿಂದ ಬಿ.ಎಲ್. ಪದವಿಯನ್ನು ಪಡೆದು, 1909ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇರಿಕೊಂಡರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25ವರ್ಷ ಸೇವೆ ಸಲ್ಲಿಸಿ, 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ವರ್ಗವಾಗಿ 1942ರವರೆಗೆ ಕಾಲೇಜಿನ ಸರ್ವತೋಮುಖ ಬೆಳವಣಿಗೆಗಾಗಿ ಅವಿರತವಾಗಿ ಶ್ರಮಿಸಿದರು.
ಬೆಂಗಳೂರು: ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದ ಜಾಗದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಅವರು ಹಾಗೂ ಬಂದು ಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿ ಬಾರದ ಲೋಕ ಸೇರಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್ .ಸಿ. ಕಾಲೇಜಿನಲ್ಲಿ ಓದಿದವರು. ಬಿ.ಬಿ.ಎಂ, ಎಂ.ಬಿ.ಎ ಪದವಿಧರರು. ಚಿಕ್ಕಂದಿನಿಂದಲೂ ಕವನ, ಕಥೆಗಳನ್ನು ಬರೆಯುತ್ತಿದ್ದ ಅವರು, ಕಾಲೇಜಿನಲ್ಲಿ ತಮ್ಮದೇ ರಚನೆಯ ನಾಟಕಗಳನ್ನೂ ಆಡಿಸಿದ್ದಾರೆ. ಗಡಿ ಭಾಗದವರಾದ್ದರಿಂದ ಕನ್ನಡದ ಜೊತೆಗೆ ತೆಲುಗಿನಲ್ಲೂ ಹಿಡಿತ ಚೆನ್ನಾಗಿತ್ತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಸಾಹಿತಿಗಳು, ಕಲಾವಿದರ ಸಂಪೂರ್ಣ ಮಾಹಿತಿಯನ್ನು ದತ್ತಾಂಶ ರೂಪದಲ್ಲಿ ಸಂಗ್ರಹ ಮಾಡುವುದಕ್ಕಾಗಿ ಕಲಾವಿದರ ದತ್ತಾಂಶ ಸಂಗ್ರಹಕ್ಕಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.