KD Song: ಇನ್ನೇನು 2025ರ ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿಯಿದೆ, ವರ್ಷದ ಕೊನೆಯಲ್ಲಿ ಬಂದ ಯುಐ, ಮ್ಯಾಕ್ಸ್ ಚಿತ್ರಗಳು ಭರ್ಜರಿ ಯಶಸ್ಸು ಕಾಣುತ್ತಿವೆ, ಈಗ ಹೊಸ ವರ್ಷದ ಆರಂಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಚಿತ್ರ ಎಂದರೆ ಕೆಡಿ. ಏಕ್ ಲವ್ ಯಾ ನಂತರ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ, ಕೆಡಿ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ.
Rajan Nagendra Composed Songs: ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು.
ಇದೀಗ ಮೋಡಕ್ಕೆ ಮೋಡ ಎಂಬ ಮೆಲೋಡಿ ಗಾನಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಪ್ರಮೋದ್ ಮರವಂತೆ ಅರ್ಥಪೂರ್ಣ ಸಾಹಿತ್ಯಕ್ಕೆ ರಾಕ್ ಆಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.
ಕನ್ನಡ ಚಿತ್ರರಂಗದಲ್ಲಿ ಭಕ್ತಿಗೀತೆಗಳು, ಜನಪದ ಗೀತೆಗಳು ಸಾಕಷ್ಟು ಬಂದಿದೆ. ಆದ್ರೆ ಹೊಸತನ ಹಾಗೂ ವಿಶೇಷಗಳಿಂದ ಕೂಡಿರುವ ಮೈಲಾರ ಲಿಂಗೇಶ್ವರ ಸ್ವಾಮಿಯ ಭಕ್ತಿ ಪೂರ್ಣ ಗೀತೆ ಮೈಲಾರ ಆಲ್ಬಂ ಹಾಡು ಹೊರಹೊಮ್ಮಿದ್ದು, ನೋಡಿದವರೆಲ್ಲೂ ನಿಂತಲ್ಲೇ ಉಘೇ ಉಘೇ ಮೈಲಾರ ಸ್ವಾಮಿ ಎನ್ನುತ್ತಿದ್ದಾರೆ.
ಗೌಸ್ ಪೀರ್ ಪೊಣಿಸಿರುವ ಅದ್ಭುತ ಸಾಹಿತ್ಯದ ಮಾತು ಮಾತಲ್ಲೇ ಎಂಬ ಮೆಲೋಡಿ ಹಾಡಿಗೆ ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಅಷ್ಟೇ ಸೊಗಸಾದ ಸಾಹಿತ್ಯ ನೀಡಿದ್ದು, ವಿಜಯ್ ಪ್ರಕಾಶ್ ಧ್ವನಿಯಲ್ಲಿ ಹಾಡು ಮೂಡಿಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.