ನಾಡಿನ ಸಾಹಿತಿಗಳು ಮತ್ತು ಚಿಂತಕರಿಗೆ ನಿರಂತರವಾಗಿ ಬರುತ್ತಿರುವ ಜೀವ ಬೆದರಿಕೆ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗಾಗಿ ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಪಠ್ಯಪುಸ್ತಕದಲ್ಲಿ ಹೆಡ್ಗೇವಾರ್ ಭಾಷಣ ಸೇರಿದ್ದಕ್ಕೆ ವಿರೋಧ ಮಾಡ್ತಿದ್ದಾರೆ. ಹೆಡ್ಗೇವಾರ್ ಬದಲು ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ. ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ? ಎಂದು ಮಾಜಿ ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
ಪಠ್ಯ ಪರಿಷ್ಕರಣೆಗೆ ಸಾಹಿತಿಗಳು ಅಸಮಾಧಾನ ಹೊರ ಹಾಕಿದ್ದಾರೆ.. ಹಳೆಯ ಪಠ್ಯಗಳನ್ನೇ ಮುಂದುವರೆಸುವಂತೆ ಸಾಹಿತಿಗಳು ಒತ್ತಾಯಿಸುತ್ತಿದ್ದಾರೆ. ಸಿಎಂ ಬೊಮ್ಮಾಯಿಗೆ ಸಾಹಿತಿ ಹಂಪ ನಾಗರಾಜಯ್ಯ ಪತ್ರ ಬರೆದಿದ್ದಾರೆ. ಹೊಸ ಪಠ್ಯವನ್ನು ತಡೆದು ಹಿಂದಿನ ಪಠ್ಯವನ್ನೇ ಮುಂದುವರಿಸಿ ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಬುರ್ಗಿ, ಪನ್ಸಾರೆ, ಗೌರಿ ಲಂಕೇಶ್ ಅವರನ್ನ ಬಲಪಂಥೀಯ ಸಂಘಟನೆಗಳು, ಸನಾತನವಾದಿಗಳು ಹತ್ಯೆ ಮಾಡಿದ್ದಾರೆ.ಈಗ ಸಿದ್ರಾಮಯ್ಯ ಸೇರಿದಂತೆ ಅನೇಕ ಸಾಹಿತಿಗಳಿಗೆ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ. ಕಾಂಗ್ರೆಸ್ ಪಕ್ಷ ದೇಶದ ಐಕ್ಯತೆಗಾಗಿ ತ್ಯಾಗ ಬಲಿದಾನ ಮಾಡಲು ಸಿದ್ದ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಪತ್ರಿಗೋಷ್ಠಿಯಲ್ಲಿ ಹೇಳಿದರು.
ಕನ್ನಡ ಪುಸ್ತಕ ಪ್ರಾಧಿಕಾರವು 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.