ನಾನು ಸಂಸತ್ತಿನಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾ ಅದಾನಿ ಅವರ ಜತೆಗಿನ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದೆ. ಅದಕ್ಕೆ ಅವರು ನನ್ನ ಮೈಕ್ ಆಫ್ ಮಾಡಿ ನನ್ನನ್ನು ಸಂಸತ್ತಿನಿಂದ ಅನರ್ಹರನ್ನಾಗಿ ಮಾಡಿದರು. ಲೋಕಸಭೆಯಿಂದ ಹೊರಹಾಕಿದರು. ಕಾರಣ ನಾನು ಭ್ರಷ್ಟಾಚಾರದ ಬಗ್ಗೆ ಮೋದಿ ಅವರನ್ನು ಪ್ರಶ್ನಿಸಿದ್ದೆ. ಮೋದಿ ಹಾಗೂ ಅದಾನಿ ಅವರ ನಡುವಣ ಸಂಬಂಧವೇನು? ಕೇಳಿದೆ. ಬಿಜೆಪಿಯವರ ಈ ದಬ್ಬಾಳಿಕೆಗೆ ನಾನು ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ.
Karnataka Assembly Election 2023: ಕಾಂಗ್ರೆಸ್ ಭದ್ರಕೋಟೆಯಾಗಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಹೈಕಮಾಂಡ್ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ.
ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದು ಬಿಜೆಪಿ ಮತಗಳ ಮೇಲೆ ಪರಿಣಾಮ ಬೀರಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Karnataka Assembly Election 2023: ಲಕ್ಷ್ಮಣ ಸವದಿ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದವರು. ಅವರು ಸೋತಾಗಲೂ ಎಂಎಲ್ಸಿ ಮಾಡಿ ಡಿಸಿಎಂ ಮಾಡಲಾಗಿತ್ತು. ಅವರು ಡಿಸಿಎಂ ಆಗಲು ನಮ್ಮ ತ್ಯಾಗ ಕಾರಣ. ನಾವು 17 ಮಂದಿ ರಾಜೀನಾಮೆ ಕೊಟ್ಟಿದ್ದಕ್ಕೆ ಬಿಜೆಪಿ ಆಡಳಿತಕ್ಕೆ ಬಂತು ಅಂತಾ ಬಿಸಿ ಪಾಟೀಲ್ ಹೇಳಿದ್ದಾರೆ.
Jagadish Shettar join congress : ಪಕ್ಷ ಮುಖ್ಯ ವ್ಯಕ್ತಿ ಅಲ್ಲ ಎಂಬ ಸಿದ್ಧಾಂತ ನಂಬಿ ಪಕ್ಷವನ್ನು ಬೆಳೆಸಿದವರು, ಆದರೆ ಇಂದು ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ನಿಯಂತ್ರಣದಲ್ಲಿದೆ. ಅವರೆಲ್ಲಾ ವ್ಯವಸ್ಥಿತವಾಗಿ ಸಂಚು ರೂಪಿಸಿ ನನ್ನನ್ನು ಹೊರಗೆ ಹಾಕಿದ್ದಾರೆ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಟಿ.ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಭ್ಯರ್ಥಿ ಕೃಷ್ಣಮೂರ್ತಿ ಡಿ.ಕೆ. ಸಹೋದರರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಹಣ ಪಡೆದು ಧನಂಜಯ್ಯ ಅವರಿಗೆ ಟಿಕೆಟ್ ನೀಡಿದ್ದಾಗಿ ದೂರಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಟಿಕೆಟ್ ಸರ್ವೇ ಬರೀ ಬೋಗಸ್ ಎಂದು ಕಿಡಿಕಾರಿದ್ದಾರೆ.
ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ನಗರದ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿಯನ್ನು ಗುಣಗಾನ ಮಾಡಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮುನ್ನ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ನೀರು ಕುಡಿದು ಆಗಿದೆ. ಈಗ ನಮ್ಮ ಹೆಮ್ಮೆಯ ನಂದಿನಿ ಸಂಸ್ಥೆ ನುಂಗಲು ಹೊರಟಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಕೋಲಾರದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು
ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ, ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ದ್ವಂದ್ವ ಹೇಳಿಕೆ ನೀಡುವ ಮೂಲಕ ಈಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಮುಂದಿನ ನಡೆಯನ್ನು ಇನ್ನೂ ರಹಸ್ಯವಾಗಿ ಇಟ್ಟಿದ್ದಾರೆ.
Karnataka Assembly Election 2023: ಅರವಿಂದ ಲಿಂಬಾವಳಿ ಅವರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುವ ಹಿನ್ನೆಲೆ ಅವರ ಪತ್ನಿಗೆ ಅದೃಷ್ಟ ಒಲಿದು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Karnataka Election 2023 : ಸೂಕ್ಷ್ಮ ಪ್ರದೇಶಗಳಂತೆ ನೂರಕ್ಕೂ ಹೆಚ್ಚು ಏರಿಯಾ ಲಿಸ್ಟ್ ಔಟ್ ಮಾಡಲಾಗಿದೆ. ಬರೊಬ್ಬರಿ 405 ಮಿಲಿಟರಿ ಪೋರ್ಸ್ ಕಂಪನಿಗಳು ರಾಜ್ಯದಲ್ಲಿ ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 105 ಸೆಂಟ್ರಲ್ ಆರ್ಮಿ ಕಂಪನಿಯನ್ನ ಮಾತ್ರ ತೆಗೆದುಕೊಳ್ಳಲಾಗಿತ್ತು. ಈ ಬಾರಿ 405 ಕಂಪನಿಗಳಲ್ಲಿ ಅರವತ್ತು ಸಾವಿರ ಮಂದಿಯ ಪಡೆಯನ್ನು ನೇಮಿಸಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ.47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.