Gundlupet Vidhanasabha Chunavane Results 2023: ಮಹಾದೇವಪ್ರಸಾದ್ ಅವರು ಮಾಡಿದ್ದ ಅಭಿವೃದ್ಧಿ ನೆನಪಿಗೆ ಜನರು ಮತ ಹಾಕಿದ್ದು ಜನರ ಅಪೇಕ್ಷೆಯಂತೆ ಗೆದ್ದಿದ್ದೇನೆ- ಗಣೇಶ್ ಪ್ರಸಾದ್
Chamarajanagar Assembly Election Result 2023: ಸೋಮಣ್ಣ ಬಂದ ಬಳಿಕ ಚಾಮರಾಜನಗರ ಹೈವೋಲ್ಟೆಜ್ ಕ್ಷೇತ್ರವಾಗಿ ಬದಲಾಗಿತ್ತು, ಸೋಮಣ್ಣ ಚಾಮರಾಜನಗರ ಮತದಾರರಾಗಿ ಬದಲಾಗಿದ್ದರು. ಆದರೆ, ಎಲ್ಲದಕ್ಕೂ ಮತದಾರ ಮತಯಂತ್ರದ ಮೂಲಕವೇ ಉತ್ತರ ಕೊಟ್ಟಿದ್ದಾನೆ.
Kollegala Assembly Election Result 2023: ಚಾಮರಾಜನಗರದ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಎ.ಆರ್.ಕೃಷ್ಣಮೂರ್ತಿ, 1 ಮತದ ಅಂತರದಿಂದ ಸೋತಿದ್ದೆ. ಆದರೀಗ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದೇನೆ, ನನಗೆ ಅಂತರ ಮುಖ್ಯವಲ್ಲ, ಗೆಲುವು ಮುಖ್ಯ ಎಂದು ಹೇಳಿದರು.
Karnataka Assembly Election Result 2023: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಮತ ಎಣಿಕಾ ಕಾರ್ಯವು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಮತಪೆಟ್ಟಿಗೆಯಲ್ಲಿ 2615 ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ರಾಜ್ಯದಲ್ಲಿ ಮೇ 10 ರಂದು 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ರಾಜ್ಯದ ಎಲ್ಲಾ 58,285 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.
Chamarajanagar assembly election result 2023: ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ನಾಲ್ಕು ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ, ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
Karnataka Assembly Election Result 2023: ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನಂತಹ ಉದ್ಯಾನವನಗಳಿಂದ ಬೆಂಗಳೂರು ನಗರವನ್ನು ಉದ್ಯಾನ ನಗರಿ ಎಂದು ಕರೆಯಲಾಗುತ್ತದೆ.ಅಷ್ಟೇ ಅಲ್ಲದೆ ಇದು ವಿಶ್ವದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ತವರೂರು ಕೂಡ ಆಗಿದೆ.ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
Mandya assembly election result 2023: 2018ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನವನ್ನು ಗೆದ್ದು ಬೀಗಿದ್ದ ಜೆಡಿಎಸ್ ಈ ಬಾರಿಯ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮಾತ್ರ ಶಕ್ತವಾಗಿದ್ದರೆ, 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಮತ ಲಭ್ಯವಾಗಿದೆ. ಮೇಲುಕೋಟೆಯಿಂದ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಕೂಡ ಗೆಲುವು ಸಾಧಿಸಿದ್ದಾರೆ.
Mysore Vidhan Aabha Chunavane Result 2023: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಭದ್ರಕೋಟೆ ಎನಿಸಿಕೊಂಡಿರುವ ಹಳೆ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಹವಣಿಸುತ್ತಿರುವ ಬಿಜೆಪಿ ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.
Ramnagara assembly election result 2023: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದಾಗಿ ಎಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭಾರೀ ಮುಖಭಂಗ ಅನುಭವಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನೆಲೆಯಲ್ಲಿ ನಾಳೆ ಅಂದರೆ 13.05.2023 ರಂದು ನಡೆಯಲಿರುವ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಮತ ಎಣಿಕಾ ಕಾರ್ಯವು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಪ್ರತಿ ಮತ ಎಣಿಕಾ ಕೇಂದ್ರದಲ್ಲೂ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡಲು ಸುಸಜ್ಜಿತ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.