Karnataka Election 2023: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಮಹದಾಯಿ ಯೋಜನೆಗೆ ಅನುಮತಿ ನೀಡಿದ್ದು, ಡಿಪಿಆರ್ ಕೂಡ ಸಿದ್ದ ಆಗಿದೆ. ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಯೋಜನೆ ಆರಂಭಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
H D Kumaraswamy: "ಸಿ" ಓಟರ್ ಕಾಂಗ್ರೆಸ್ ಪಕ್ಷ ಸಮೀಕ್ಷೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಅವರ ಸಮೀಕ್ಷೆ ನಿಜ ಆಗಲ್ಲ. 150 ಸ್ಥಾನ ಕಾಂಗ್ರೆಸ್ ಗೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬಳ್ಳಾರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೇಂದ್ರ ಸಚಿವ ಕಿಶಾನ್ ಪಾಲ್ ಗುರ್ಜರ್ ಪ್ರಚಾರ ನಡೆಸಿದ್ರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಶಾನ್, ಕಾಂಗ್ರೆಸ್ ಬಳಿ ನಾಯಕತ್ವ ಇಲ್ಲ, ಮಾಡಿದ ಕೆಲಸಗಳೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದ್ರು.. ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮಕ್ಕೆ ಆಗಮಿಸಿದ ಸಿಎಂ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ರು..
ಕೋಲಾರದಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ ನಡೆಯಿತು.ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಬಳಿ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. BJP ಅಭ್ಯರ್ಥಿ ಗುಂಜೂರು ಶ್ರೀನಿವಾಸರೆಡ್ಡಿ ಪರ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತಯಾಚನೆ ಮಾಡಿದ್ರು..
ತಾಕತ್ತಿದ್ದರೆ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾಗಿ ಪಕ್ಷ ಸಂಘಟನೆ ಮಾಡಲಿ. ಸಿಎಂ, ವಿಪಕ್ಷ ನಾಯಕ ಸ್ಥಾನ ಇಲ್ಲ ಅಂದ್ರೆ ಕಾಂಗ್ರೆಸ್ಸಿಗೆ ಒದ್ದು ಬರ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರ ಕಳ್ಳತನ ಆಗಿದೆ. ಇಡಿ, ಐಟಿ ಎಲ್ಲವೂ BJPಯವರ ಕೈಯಲ್ಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.. ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್ನಿಂದ ವಿಫಲವಾಗಿದೆ. ಬಿಜೆಪಿಯವರೇ ಎಲ್ಲಾ ಕಡೆ ಎಟಿಎಂ ಇಟ್ಟಿದ್ದಾರೆ.ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸ್ತಾ ಇದೆ, ಮನಿ ಮತ್ತು ಮಸಲ್ ಪವರ್ ಬಳಸ್ತಾ ಇದ್ದಾರೆ ಎಂದು ಖರ್ಗೆ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.