Haveri Assembly Election Result 2023: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದೆ. 2018ರ ಚುನಾವಣೆಯಲ್ಲಿ ಒಟ್ಟು 6 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
Chamarajanagar Assembly Election Result 2023: ಸೋಮಣ್ಣ ಬಂದ ಬಳಿಕ ಚಾಮರಾಜನಗರ ಹೈವೋಲ್ಟೆಜ್ ಕ್ಷೇತ್ರವಾಗಿ ಬದಲಾಗಿತ್ತು, ಸೋಮಣ್ಣ ಚಾಮರಾಜನಗರ ಮತದಾರರಾಗಿ ಬದಲಾಗಿದ್ದರು. ಆದರೆ, ಎಲ್ಲದಕ್ಕೂ ಮತದಾರ ಮತಯಂತ್ರದ ಮೂಲಕವೇ ಉತ್ತರ ಕೊಟ್ಟಿದ್ದಾನೆ.
Kollegala Assembly Election Result 2023: ಚಾಮರಾಜನಗರದ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಎ.ಆರ್.ಕೃಷ್ಣಮೂರ್ತಿ, 1 ಮತದ ಅಂತರದಿಂದ ಸೋತಿದ್ದೆ. ಆದರೀಗ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದೇನೆ, ನನಗೆ ಅಂತರ ಮುಖ್ಯವಲ್ಲ, ಗೆಲುವು ಮುಖ್ಯ ಎಂದು ಹೇಳಿದರು.
Shivamogga Karnataka Election Result 2023: ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗು ಒಂದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಮತ್ತು ಸಾಗರದಲ್ಲಿ ತೀವ್ರ ಪೈಪೋಟಿ ನಡೆದಿತ್ತು.
Tumkur Karnataka Election Result 2023: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಒಟ್ಟು 11 ಮತ ಕ್ಷೇತ್ರಗಳಿವೆ. ಅವುಗಳೆಂದರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿ, ತಿಟಪಟೂರು, ತುರುವೇಕೆರೆ, ಕುಣಿಗಲ್, ಗುಬ್ಬಿ. ಸದ್ಯ ಇಲ್ಲಿನ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಇನ್ನು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಸಹ ಕೊರಟಗೆರೆ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಇನ್ನುಳಿದಂತೆ ಕ್ಷೇತ್ರವಾರು ಗೆಲುವು ಸಾಧಿಸಿದ ಅಭ್ಯರ್ಥಿಗಳ ಹೆಸರು ಇಂತಿದೆ.
Davangere District Assembly Election Result 2023: ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ತನ್ನ ಪ್ರಾಬಲ್ಯತೆಯನ್ನು ಕಳೆದುಕೊಂಡಿದೆ. ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಹರಿಹರ, ಚನ್ನಗಿರಿ, ಮಾಯಕೊಂಡ ಹಾಗೂ ಹೊನ್ನಾಳಿ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾರ ಈ ಬಾರಿ ಸರ್ಪೈಸ್ ಫಲಿತಾಂಶ ನೀಡಿದ್ದಾನೆ.
Tumkur Karnataka Election Result 2023: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಒಟ್ಟು 11 ಮತ ಕ್ಷೇತ್ರಗಳಿವೆ. ಅವುಗಳೆಂದರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿ, ತಿಟಪಟೂರು, ತುರುವೇಕೆರೆ, ಕುಣಿಗಲ್, ಗುಬ್ಬಿ. ಈ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಮತ್ತು ಸೋಲುಂಡ ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜೀ ಕನ್ನಡ ನ್ಯೂಸ್ ನೀಡಲಿದೆ.
Karnataka Election Results 2023: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ರಾಜ್ಯಾದ್ಯಂತ 36 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ನಿಮ್ಮ ಜಿಲ್ಲೆಯ ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
Karnataka Assembly Election Result 2023: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಮತ ಎಣಿಕಾ ಕಾರ್ಯವು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭಗೊಳ್ಳಲಿದೆ. ಮತಪೆಟ್ಟಿಗೆಯಲ್ಲಿ 2615 ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ರಾಜ್ಯದಲ್ಲಿ ಮೇ 10 ರಂದು 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ರಾಜ್ಯದ ಎಲ್ಲಾ 58,285 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.
Chamarajanagar assembly election result 2023: ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ನಾಲ್ಕು ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ, ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
Karnataka Assembly Election Result 2023: ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನಂತಹ ಉದ್ಯಾನವನಗಳಿಂದ ಬೆಂಗಳೂರು ನಗರವನ್ನು ಉದ್ಯಾನ ನಗರಿ ಎಂದು ಕರೆಯಲಾಗುತ್ತದೆ.ಅಷ್ಟೇ ಅಲ್ಲದೆ ಇದು ವಿಶ್ವದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ತವರೂರು ಕೂಡ ಆಗಿದೆ.ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
Mandya assembly election result 2023: 2018ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನವನ್ನು ಗೆದ್ದು ಬೀಗಿದ್ದ ಜೆಡಿಎಸ್ ಈ ಬಾರಿಯ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮಾತ್ರ ಶಕ್ತವಾಗಿದ್ದರೆ, 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಮತ ಲಭ್ಯವಾಗಿದೆ. ಮೇಲುಕೋಟೆಯಿಂದ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಕೂಡ ಗೆಲುವು ಸಾಧಿಸಿದ್ದಾರೆ.
Chitradurga District Assembly Election Result 2023: ಕೋಟೆನಾಡಲ್ಲಿ ಕಾಂಗ್ರೆಸ್ ವಿಜಯ ದುಂದುಬಿ ಆರಿಸಿದೆ. ಆರು ಕ್ಷೇತ್ರದಲ್ಲಿ ಐದು ಕ್ಷೇತ್ರ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅದರಲ್ಲಿ ವಿಶೇಷವಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಹೀರೋ ಆಗಿದ್ದಾರೆ.
Chikkaballapur Karnataka Assembly Election Result 2023 : ಕ್ಷಣ ಕ್ಷಣಕ್ಕೂ 224 ಮತ ಕ್ಷೇತ್ರಗಳ ಫಲಿತಾಂಶ ಕುತೂಹಲಕಾರಿಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರೋಚಕ ಸಮರ ಸಾಗಿದೆ. ಜಿಲ್ಲಾವಾರು ವಿಧಾನಸಭಾ ಕ್ಷೇತ್ರಗಳ ಸಂಪೂರ್ಣವಾದ ಫಲಿತಾಂಶ ಇಲ್ಲಿದೆ ನೋಡಿ..
Kolar Karnataka Assembly Election Result 2023 : 2023 ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕೋಲಾರ ಜಿಲ್ಲೆಯಲ್ಲಿರುವ 6 ವಿಧಾನಸಭಾ ಮತ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಬಾರಿಯೂ ಸಹ ಬಿಜೆಪಿ ಒಂದು ಖಾತೆ ತೆಗೆದಿಲ್ಲ.
Mysore Vidhan Aabha Chunavane Result 2023: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಭದ್ರಕೋಟೆ ಎನಿಸಿಕೊಂಡಿರುವ ಹಳೆ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಹವಣಿಸುತ್ತಿರುವ ಬಿಜೆಪಿ ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.
Davangere District Assembly Election Result 2023: ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿರುವ ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯತೆ ಕೊಂಚ ಹೆಚ್ಚಿದೆ. ಇನ್ನು ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಹರಿಹರ, ಚನ್ನಗಿರಿ, ಮಾಯಕೊಂಡ ಹಾಗೂ ಹೊನ್ನಾಳಿ ವಿಧಾನಸಭೆ ಕ್ಷೇತ್ರಗಳಿದ್ದು, ಈ ಕ್ಷೇತ್ರದಲ್ಲಿ ಗೆಲುವು ಕಂಡ ಮತ್ತು ಸೋಲನ್ನು ಅನುಭವಿಸಿದ ಅಭ್ಯರ್ಥಿಗಳ ಪಿನ್ ಟು ಪಿನ್ ಮಾಹಿತಿಯನ್ನು ಜೀ ಕನ್ನಡ ನ್ಯೂಸ್ ನೀಡಲಿದೆ.
Karntaka Assembly election result : ಕುತೂಹಲಕ್ಕೆ ಕಾರಣವಾಗಿದ್ದ 2023ರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇತ್ತ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ 4 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ವಿಧಾನಸಭಾ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಒಂದೇ ಕ್ಷೇತ್ರದಲ್ಲಿ ಕಮಲ ಅರಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.