ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.
ಬೆಂಗಳೂರು ನಗರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯೂಸಫ್ ಷರೀಫ್ ಅಲಿಯಾಸ್ ‘ಕೆಜಿಎಫ್ ಬಾಬು’ ಹೀನಾಯ ಸೋಲು ಕಂಡಿದ್ದಾರೆ.
ಕರ್ನಾಟಕ ವಿಧಾನಪರಿಷತ್ ನ (council) 4 ಕ್ಷೇತ್ರಗಳಿಗೆ ಮತದಾನ (polling )ನಡೆಯುತ್ತಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯು ಅಕ್ಟೋಬರ್ 28 ರಂದು ಜರುಗಲಿದೆ. ಚುನಾವಣೆಗಳಿಗಾಗಿ ಭಾರತ ಚುನಾವಣಾ ಆಯೋಗ ಆದೇಶಿಸಿದಂತೆ ಮತದಾನಕ್ಕಾಗಿ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ (ಎಪಿಕ್) ಹೊಂದಿರುವ ಮತದಾರರು ಮತದಾನದ ಸಮಯದಲ್ಲಿ ಹಾಜರಪಡಿಸಬೇಕಾಗುತ್ತದೆ.
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಹಾಗೂ ಭಾರತ ಚುನಾವಣಾ ಆಯೋಗವು ನೀಡಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಚಾಚೂ ತಪ್ಪದೇ ಪಾಲಿಸುವುದು ಕಡ್ಡಾಯವಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 28 ರಂದು ಜರುಗಲಿದ್ದು, ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಬೇಕಾಗಿದೆ.
ಧಾರವಾಡ, ಗದಗ,ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಇಂದು ಜರುಗಿತು.19 ಅಭ್ಯರ್ಥಿಗಳಿಂದ ಸಲ್ಲಿಸಲ್ಪಟ್ಟಿದ್ದ 32 ನಾಮಪತ್ರಗಳಲ್ಲಿ 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
ಶಿರಾ ಕ್ಷೇತ್ರದಲ್ಲಿ ನಮ್ಮ ಹಿರಿಯ ನಾಯಕ ಜಯಚಂದ್ರ ಅವರು ಕಳೆದ ಚುನಾವಣೆಯಲ್ಲಿ 10 ಸಾವಿರ ಮತಗಳ ಅಂತರದಲ್ಲಿ ಸೊತ್ತಿದ್ದರು. ಈ ಬಾರಿ ಇಡೀ ಜಿಲ್ಲೆ ಒಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸಲಿದೆ.
ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಮೂರು ಮತ್ತು ಶಿಕ್ಷಕರ ಕ್ಷೇತ್ರದ ಮೂರು ಸ್ಥಾನಗಳಿಗೆ ಜೂ.8 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.