ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ಸಚಿವ ಜಾರಕಿಹೊಳಿ ಕಿವಿಮಾತು ಹೇಳಿದರು.ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಶನಿವಾರ(ಆ.5) 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗ್ಯಾರಂಟಿ ಯೋಜನೆಯಾಗಿರುವ "ಗೃಹಜ್ಯೋತಿ" ಯೋಜನೆಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಅವರು ಮಾತನಾಡಿದರು.
ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣದಿಂದಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಗುರುತರ ಆರೋಪಗಳನ್ನು ಮಾಡಿದ್ದಾರೆ.
ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರೂಪಾಯಿಗೂ ಮೀರಿ ಕೈ ಬದಲಾಗಿದೆನಡೆದಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಹಾ ಸುಳ್ಳುಗಾರ. ದೇಶದಲ್ಲಿ ಹಿಟ್ ಅಂಡ್ ರನ್ ಹೇಳಿಕೆ ನೀಡುವ ಮುಖಂಡರಲ್ಲಿ ಕುಮಾರಸ್ವಾಮಿ ಮೊದಲಿಗರು. ಇದು ರಾಜ್ಯದ ದುರಂತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ. ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದು,ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಯವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ.ಜುಲೈ 3 ಅಥವಾ 4ನೇ ತಾರೀಖಿನಂದು ಈ ಬಗ್ಗೆ ಘೋಷಣೆ ಮಾಡ್ತೀವಿ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.ಆರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
Karnataka Politics: ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಸಮೀಪಿಸುತ್ತಿದ್ದರೂ, ಇನ್ನು ಬಿಜೆಪಿ ವತಿಯಿಂದ ವಿಪಕ್ಷ ನಾಯಕ ಆಯ್ಕೆಆಗಿಲ್ಲ. ಈ ನಿಟ್ಟಿನಲ್ಲಿ ವಿಪಕ್ಷ ನಾಯಕರಾಗಿ ಬೇಕೆಂದು ಪ್ರಕಟಣೆ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.