ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರೋದು ಹೆಮ್ಮೆಯ ವಿಚಾರ. ಇದು ರಾಜ್ಯ ಕಾಂಗ್ರೆಸ್ ಗೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ ಎಂಬುದನ್ನು ಹೇಳಲು ಬಯಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ.ಹೀಗಾಗಿ ಬಿಜೆಪಿ, ಖಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ನಾವು ಕಲಿಯುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಈ ಸರ್ಕಾರ ಮಾನವೀಯತೆಯನ್ನು ಕಳೆದುಕೊಂಡಿದೆ. ಇಂತಹ ಗಂಭೀರ ಪ್ರಕರಣಲ್ಲಿ ಯಾರೇ ಆದರೂ ಮಾನವೀಯತೆ ಮೆರೆಯಬೇಕು. ಆದರೆ ಸರ್ಕಾರದಲ್ಲಿ ಮಾನವೀಯತೆ ಹಣ ಕೊಟ್ಟವರಿಗೆ ಮಾತ್ರ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
‘ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಇದಕ್ಕೆ ತಪ್ಪಿದ್ದಲ್ಲಿ ನಾನೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳ ಮುಂದೆ ಧರಣಿ ಕೂರುವುದಾಗಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ಆಸ್ಪತ್ರೆಗೆ ಬೈಕಿನಲ್ಲಿ ಕರೆದೊಯ್ಯುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ನಿಯಮಗಳ ನೆಪದಲ್ಲಿ ಕಿರುಕುಳ ನೀಡಿದ ಪೊಲೀಸರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಕರ್ನಾಟಕದ ಪತ್ರಿಕಾ ಮಿತ್ರರು ವಿಶೇಷವಾದ ಗೌರವ ಹೊಂದಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಜನೋಪಯೋಗಿ ಕೆಲಸಗಳನ್ನು ಮಾಡಿ ಜನಪ್ರಿಯತೆ ಪಡೆಯುತ್ತಿದೆ. ಇದನ್ನು ಸಹಿಸದ ಕಾಂಗ್ರೆಸ್, ಬಿಜೆಪಿ ಸರ್ಕಾರ ಹಾಗೂ ಪತ್ರಕರ್ತರ ಗೌರವ ಹಾಳು ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಭಾರತೀಯ ಜನತಾ ಪಕ್ಷದ ಸರ್ಕಾರ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದೆ, ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಮ್ಮ ಪಕ್ಷದ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಸಚಿವ MTB ನಾಗರಾಜ್ ಅವರು ಕೆ.ಆರ್ ಪುರ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಅವರ ಸಾವಿನ ಕುರಿತು, ' ಪೋಸ್ಟಿಂಗ್ ಗಾಗಿ 70-80 ಲಕ್ಷ ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ' ಎಂದು ಬಹಿರಂಗವಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಸ್ಟಿ ಸಮುದಾಯದವರಿಗೆ ಕೊಟ್ಟಿರುವ ಮೀಸಲಾತಿ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬಿಜೆಪಿಯ ಎಷ್ಟು ನಾಯಕರು ರಾಮಾಯಣವನ್ನು ಓದಿದ್ದಾರೆ? ರಾಮಾಯಣದ ಅಯೋಧ್ಯ ಕಾಂಡದಲ್ಲಿ ಇದರಲ್ಲಿ ರಾಮ ಹಾಗೂ ಭರತನ ಸಂಭಾಷಣೆಯಲ್ಲಿ ರಾಮ ತಮ್ಮ ತಮ್ಮನಿಗೆ ನನ್ನ ಉಪಸ್ಥಿತಿಯಲ್ಲಿ ಹದಿನಾಲ್ಕು ವರ್ಷ ರಾಜ್ಯವನ್ನು ಆಳ್ವಿಕೆ ಮಾಡು ಎಂದು ಹೇಳುತ್ತಾನೆ.
ಬಹಿರಂಗವಾಗಿ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಸಚಿವ ವಿ ಸೋಮಣ್ಣ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.. ಕರ್ನಾಟಕ ರಾಷ್ಟ್ರ ಸಮಿತಿಯಿಂದ ದೂರು ನೀಡಿದ್ದು, ಸೋಮಣ್ಣ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.
ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.
ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಗ್ರ ಅಭಿವೃದ್ಧಿಯ ಬಗ್ಗೆ ನಮಗೆ ಸ್ಷಷ್ಟಯೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.