ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಪೊಗರು ಮಾತುಗಳು, ಬ್ಲ್ಯಾಕ್ ಮೇಲ್ ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲಾ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಸಾಮಾಜಿಕ ಜಾಲತಾನದ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ.
ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬಾಲಿಶವಾದುದ್ದು. ದೇಶದ ಜನರಿಂದ ಆಯ್ಕೆಯಾಗಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪ್ರಶ್ನಾತೀತರೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡುತ್ತಿರುವುದು ಒಳ್ಳೆಯದಲ್ಲ... ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ... ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ಕಿಡಿ... ಕನ್ನಡಿಗರ ಶಾಂತಿ ಸಹನೆಯ ನಡೆಯನ್ನು ಕೇಂದ್ರ ಗಮನಿಸುತ್ತಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.