ಬಿಜೆಪಿ-ಜೆಡಿಎಸ್ ʻಲೋಕಮೈತ್ರಿʼಗೆ ದಳದಲ್ಲಿ ಭಿನ್ನರಾಗ.. ಚೌತಿ ಬಳಿಕ ʻಕೈʼ ಹಿಡಿಯಲಿರುವ ಮಾಜಿ ಜೆಡಿಎಸ್ ಶಾಸಕ.. ಸೆಪ್ಟೆಂಬರ್ 21ರಂದು ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2 ದಿನ ಪ್ರಗತಿ ಪರಿಶೀಲನಾ ಸಭೆ.. ರಾಜ್ಯದ ಎಲ್ಲ ಜಿಲ್ಲೆಯ ಡಿಸಿ ಮತ್ತು ಜಿಲ್ಲಾ ಪಂ. ಸಿಇಓಗಳು ಭಾಗಿ.. ಪುಸಕ್ತ ಸಾಲಿನ ಮುಂಗಾರು ಅವಧಿಯ ಹವಾಮಾನ ಪರಿಸ್ಥಿತಿ ಚರ್ಚೆ..
62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕುಗಳ ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನದ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ. ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು.
ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶೋಷಿತ ಸಮುದಾಯಗಳ ಜನರಿಗೆ ಕಾನೂನಾತ್ಮಕ ರಕ್ಷಣೆ ಮತ್ತು ಹಲ್ಲೆ, ದೌರ್ಜನ್ಯಕ್ಕೊಳಪಟ್ಟವರಿಗೆ ನ್ಯಾಯ ದೊರಕಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಭೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
"ಮತ್ತೊಬ್ಬರಿಗೆ ತೊಂದರೆ ಮಾಡು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಎಲ್ಲಾ ಧರ್ಮದವರು ನೆಮ್ಮದಿಯಾಗಿ ಬದುಕುವಂತೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ನಿರ್ಮಿಸಲು ಸರ್ಕಾರ ಶ್ರಮಿಸಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಜೆಡಿಎಸ್ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಕ್ಕೆ ಬಂದು 9 ವರ್ಷಗಳಾದರೂ ಮೋದಿಯವರು ಒಂದೇ ಒಂದು ಆಶ್ವಾಸನೆ ಈಡೇರಿಸಿಲ್ಲ. ಅದಕ್ಕೆ ಇಂಡಿಯಾವನ್ನು ಭಾರತ ಎಂದು ಬದಲಾಯಿಸಲು ಹೊರಟಿದ್ದಾರೆ. ಬಿಜೆಪಿಗೆ ಕಾರ್ಯಕ್ರಮಗಳನ್ನು ನೀಡಲು ತಾಕತ್ತಿಲ್ಲ ಅದಕ್ಕೆ ಹೆಸರು ಬದಲಾವಣೆ ರಾಜಕೀಯ ಮಾಡುತ್ತಿದ್ದಾರೆ.ಬಹಳ ಶಿಸ್ತು ಇರುವ ಪಕ್ಷ ಎಂದು ಹೇಳುತ್ತಾರೆ ಆದರೆ ಅಶಿಸ್ತಿನಿಂದ ಬಿಜೆಪಿ ಮೂಲೆ ಸೇರುತ್ತಿದೆ ಎಂದು ಮಾಜಿ ಸಂಸದರಾದ ಉಗ್ರಪ್ಪನವರು ಹೇಳಿದ್ದಾರೆ.
ಪತ್ರಿಕೆಯೊಂದರಲ್ಲಿ ಬಂದ ವರದಿಯನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಈಗ ಬಡ ಮಹಿಳೆಯ ನೆರವಿಗೆ ಮುಂದಾಗಿದ್ದಾರೆ.ಸ್ವಂತ ಮನೆಯಾಗಲೀ, ಆಧಾರ್ ಕಾರ್ಡ್ ಆಗಲೀ ಮತ್ತು ಪಡಿತರ ಚೀಟಿಯಾಗಲೀ ಯಾವುದೇ ಸೌಲಭ್ಯವಿಲ್ಲದೆ ವಂಚಿತಳಾಗಿದ್ದ ಮಹಿಳೆಯ ಪರಿಸ್ಥಿತಿಯನ್ನು ಗಮನಿಸಿದ ಅವರು ಈಗ ಅಧಿಕಾರಿಗಳಿಗೆ ಶೀಘ್ರದಲ್ಲೇ ಪಡಿತರ ಚೀಟಿಯನ್ನು ಒದಗಿಸಲು ಸೂಚಿಸಿದ್ದಾರೆ.
ನಮ್ಮ ತಂದೆಯವರ ಆರೋಗ್ಯ ಉತ್ತಮವಾಗಿ ಚೇತರಿಸಿಕೊಂಡಿದ್ದು, ಶೀಘ್ರದಲ್ಲಿಯೇ ಅವರು ಮನೆಗೆ ಮರಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ದೇಶದ ಇನ್ಯಾವ ರಾಜ್ಯಗಳಲ್ಲೂ ಜಾರಿಯಾಗಿಲ್ಲ. ಹಾಗಾಗಿ ಇದು ಕರ್ನಾಟಕದ ಮಾದರಿಯಾಗಿದೆ. ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ
ಶನಿವಾರ ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದ ಸಿಬ್ಬಂದಿ ಕ್ವಾರ್ಟರ್ಸ್ನಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
"ನಾವೆಲ್ಲಾ ಇಂದು ಭಾರತವನ್ನ, ಸಂವಿಧಾನ, ವೈವಿಧ್ಯಮಯ ಸಂಸ್ಕೃತಿಯನ್ನ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದೇವೆ. ದೇಶದಲ್ಲಿ ಭಯದ ವಾತಾವರಣ, ಹಿಂಸೆ ಹೆಚ್ಚಾಗಿದೆ. ಈ ಎಲ್ಲಾ ಸಂಕಷ್ಟಗಳ ವಿರುದ್ಧ ನಾವು ಒಂದಾಗಿ ಹೋರಾಡಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.