ಮತಾಂಧ ಟಿಪ್ಪುವಿನ ಪಾಠ ಮಕ್ಕಳು ಕಲಿತು ಯಾವ ದೇಶಭಕ್ತಿಯನ್ನು ಬೆಳೆಸಿಕೊಳ್ಳಲು ಸಾಧ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರೈಸುತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಪ್ರಶ್ನಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಸರ್ಕಾರ ಬದ್ಧವಾಗಿದೆ. ಅವಶ್ಯಕತೆ ಇರುವುದನ್ನು ಸೇರಿಸಿ, 5 ಜನರ ಸಮಿತಿ ಮಾಡಿಲಾಗಿದೆ. ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕ ಹಾಗೂ ಮತಾಂತರ ನಿಷೇಧ ಕಾಯ್ದೆ ಎರಡು ತಿದ್ದುಪಡಿ ವಾಪಸ್ ಪಡೆದಿದ್ದೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ರಾಜ್ಯದಲ್ಲಿ ತಣ್ಣಗಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ಗುದ್ದಾಟ ಮತ್ತೆ ಮುನ್ನಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಎಡವಟ್ಟು ಸರಿಪಡಿಸಲು ಶಿಕ್ಷಣ ಇಲಾಖೆ ಸಿಎಂ ಸೂಚನೆಯಂತೆ ಮತ್ತೊಂದು ಸಮಿತಿ ಮೊರೆ ಹೋಗಿದೆ.
ಸರ್ಕಾರದ ಪಠ್ಯಪುಸ್ತಕದಲ್ಲಿ ಆಗಿರುವ ಲೋಪದೋಷಗಳಿಂದಾಗಿ ನಾಡಿನ ಅಸ್ಮತೆಗೆ ಧಕ್ಕೆಯಾಗಿದೆ.ಈ ಕ್ರಮದ ವಿರುದ್ದ ಹಿರಿಯರು,ಚಿಂತಕರು, ವಿವಿಧ ಸಂಘಟನೆಗಳ ಮುಖಂಡರು ಪಕ್ಷಾತೀತವಾಗಿ ಧರಣಿಗೆ ಬೆಂಬಲ ಸೂಚಿಸಿದ್ದಾರೆ. ಸರ್ಕಾರ ಎಚ್ಚೆತ್ತುಕೊಂಡು ಪರಿಷ್ಕೃತ ಪಠ್ಯಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.