ಸರ್ಕಾರದ ವಿರುದ್ಧ ಕೆಂಪಣ್ಣ ಕಮಿಷನ್ ಆರೋಪ ವಿಚಾರದಲ್ಲಿ ಕಾಂಗ್ರೆಸ್ ಪ್ರಚೋದನೆ ಪಡೆದು ಆರೋಪ ಮಾಡುತ್ತಿದ್ದಾರೆ ಎಂದು ಗೌರಿಬಿದನೂರಿನಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಆರೋಪಗಳು ನಿಜ ಆದರೆ ಸಾಕ್ಷಿ ಕೊಟ್ಟು ದಾಖಲೆ ನೀಡಲಿ. ಈ ರೀತಿಯ ಆರೋಪಗಳಿಂದ ಏನು ಸಿಗುತ್ತದೆ ಎಂದು ಕಿಡಿಕಾರಿದ್ದಾರೆ.
40 ಪರ್ಸೆಂಟ್ ಕಮೀಷನ್ ಬಗ್ಗೆ ನೆನ್ನೆ ಕೆಲವು ಗುತ್ತಿಗೆದಾರರು ಆರೋಪ ಮಾಡಿದ್ದಾರೆ, ಯಾವುದಾದರೂ ಸಾಕ್ಷಿ ಇದ್ರೆ ತನಿಖೆ ನಡೆಸ್ತೀವಿ ಅಂತಾರೆ. ತನಿಖೆಗೆ ಕೊಟ್ರೆ ಸಾಕ್ಷಿ ಕೊಡ್ತೀವಿ ಅಂತಾ ಇವರು ಹೇಳ್ತಾರೆ. ನಾನು ಎರಡು ಬಾರಿ ಸಿಎಂ ಆದಾಗಲೂ ಈ ಪರ್ಸಂಟೇಜ್ ಏನೂ ಇರಲಿಲ್ಲ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಸಿಎಂ ಬೊಮ್ಮಾಯಿಯಿಂದ ಹಿಡಿದು ಸಚಿವರು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕೆಂಪಣ್ಣ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.