ಕನ್ನಡದಲ್ಲಿ ತಯಾರುಗೊಂಡಿದ್ದ ಈ ಚಿತ್ರವೀಗ ತಾನೇತಾನಾಗಿ ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದೆ. ಕನ್ನಡದ ʼತಿಥಿʼ ಸಿನಿಮಾದ ಹಾದಿಯಲ್ಲಿ ಮುಂದುವರೆದು, ಜೂನ್ 29ರಂದು ಸ್ವಿಟ್ಜರ್ಲ್ಯಾಂಡಿನಲ್ಲಿಯೂ ಕೆಂಡ ಪ್ರದರ್ಶನಗೊಳ್ಳಲಿದೆ. ಇದೇನು ಸಲೀಸಾದ ಹಾದಿಯಲ್ಲ. ತನ್ನ ಕಂಟೆಂಟಿನ ಅಸಲೀ ಕಸುವಿನ ಕಾರಣದಿಂದಲೇ ಅದೆಲ್ಲ ಸಾಧ್ಯವಾಗಿದೆ.
Kenda Movie Audio Rights: ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ.
Kenda movie : ಚಿತ್ರರಂಗವೆಂಬುದು ಪುರುಷರ ಪಾರುಪಥ್ಯವೇ ಅಧಿಕವಾಗಿರುವ ಕ್ಷೇತ್ರ. ಅದರಲ್ಲಿ ನಿರ್ದೇಶಕಿಯಾಗಿ ನೆಲೆ ಕಂಡುಕೊಳ್ಳುವುದೇ ಸವಾಲು. ಅಂಥಾದ್ದರಲ್ಲೀಗ ರೂಪಾ ರಾವ್ ನಿರ್ಮಾಪಕಿಯಾಗಿಯೂ ಅವತರಿಸಿದ್ದಾರೆ. ಅದೂ ಕೂಡಾ ಒಂದು ಪಕ್ಕಾ ಗ್ಯಾಂಗ್ ಸ್ಟರ್ ಕಥೆಯ ಕೆಂಡವನ್ನು ನಿರ್ಮಾಣ ಮಾಡಿದ್ದಾರೆ.
Sahadev kelvadi : ಅಮೇಯುಕ್ತಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾದ ಚಿತ್ರ ಕೆಂಡ. ಪ್ರಸಕ್ತ ಸನ್ನಿವೇಷಗಳಿಗೆ ತಕ್ಕುದಾಗಿರುವ ಈ ಕಥನ ರಗಡ್ ಶೈಲಿಯಲ್ಲಿದೆ ಎಂಬುದನ್ನು ಶೀರ್ಷಿಕೆಯೇ ಸಾರಿ ಹೇಳಿತ್ತು. ಇದೀಗ ತೆರೆದುಕೊಂಡಿರುವ ಪಾತ್ರಗಳು ಆ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.
Kenda : ಮತ್ತೊಂದು ಭಿನ್ನ ಕಥಾನಕದ ಚಿತ್ರ ಕನ್ನಡದ ಸಿನಿಮಾ ಪ್ರೇಮಿಗಳ ಮುಂದೆ ಬರಲು ಸಜ್ಜಾಗಿ ನಿಂತಿದೆ. ಯಾವುದೇ ಸದ್ದುಗದ್ದಲವಿಲ್ಲದೆ ಚಿತ್ರೀಕರಣ ಮುಗಿಸಿಕೊಂಡಿದ್ದ ʼಕೆಂಡʼ ಎಂಬ ಸಿನಿಮಾವೀಗ ಮೋಷನ್ ಪೋಸ್ಟರ್ ಮೂಲಕ ಸದ್ದು ಮಾಡುತ್ತಿದೆ. ಈ ಹಿಂದೆ ʼಗಂಟುಮೂಟೆʼ ಎಂಬ ವಿಶಿಷ್ಟ ಸಿನಿಮಾ ಕೊಟ್ಟಿದ್ದ ತಂಡವೀಗ ʼಕೆಂಡʼದ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ಮುಖಾಮುಖಿಯಾಗುತ್ತಿದೆ. ಆ ಚಿತ್ರದ ನಿರ್ಮಾಣದಲ್ಲಿ ಭಾಗಿಯಾಗಿ ಛಾಯಾಗ್ರಾಹಕರಾಗಿದ್ದ ಸಹದೇವ್ ಕೆಲವಡಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.