Chaitra kundapura: ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಗಳು ಫುಲ್ ಆಕ್ಟಿವ್ ಆಗಿ ಎಲ್ಲಾ ಟಾಸ್ಕ್ಗಳನ್ನು ಆಡುತ್ತಿದ್ದಾರೆ. ಹೀಗಿರುವಾಗ ಚೈತ್ರ ಕುಂದಾಪುರ ಅವರು ಇತ್ತೀಚೆಗೆ ನೀಡಿದ ಟಾಸ್ಕ್ ಒಂದನ್ನು ಆಡುತ್ತಾ, ತಮ್ಮ ಪ್ರೀತಿ ಪಾತ್ರರು ನೀಡಿದ್ದ ಉಂಗುರವನ್ನು ಕಳೆದುಕೊಂಡು ಕಂಗಾಲಾಗಿದ್ದರು, ಟಾಸ್ಕ್ನ ಸಮಯದಲ್ಲಿ ಮಣ್ಣು ಕಲಿಸುತ್ತಿರುವಾಗ ಚೈತ್ರ ಅವರ ಉಂಗುರ ಆ ಮಣ್ಣಿನಲ್ಲಿ ಮಿಸ್ ಆಗುತ್ತದೆ. ಉಂಗುರ ಕಳೆದುಕೊಂಡು ಗಾಬರಿಯಲ್ಲಿ ಚೈತ್ರ ಮನದಲ್ಲಿ ದೇವರನ್ನು ನೆನೆಯುತ್ತಾರೆ, ಹೀಗೆ ನಡೆದ ಕೆಲವೇ ಕ್ಷಣಗಳಲ್ಲಿ ಚೈತ್ರ ಕಳೆದುಕೊಂಡ ಉಂಗುರ ಅವರಿಗೆ ವಾಪಸ್ ಸಿಕ್ಕಿದೆ.
"ಕೊರಗಜ್ಜ" ಸಿನಿಮಾ ಎಲ್ಲಾ ಊಹೆಯನ್ನು ಮೀರಿ ಅದ್ಭುತ ರೀತಿಯಲ್ಲಿ ಮೂಡಿಬಂದಿದೆ.ಭಾರತೀಯ ಚಿತ್ರರಂಗದಲ್ಲೇ ಇದೊಂದು ವಿಶಿಷ್ಟ ಸಿನೆಮಾ ಆಗಿ ಮೂಡಿ ಬಂದಿದೆ ಎಂದು ನಿರ್ಮಾಪಕರು ಅಭಿಪ್ರಾಯ ಪಟ್ಟಿದ್ದಾರೆ.
Simple Star Rakshith Shetty: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಭಾಗವಹಿಸಿದ್ದು, ಅಲ್ಲಿ ಕೊರಗಜ್ಜ ಈ ನಟಿಗೆ ಅಭಯ ನೀಡಿರುವ ವಿಡಿಯೋ ವೈರಲ್ ಆಗಿದೆ.
Koragajja: ನಟಿ ಶ್ರುತಿಯವರು ನಿರ್ವಹಿಸುತ್ತಿರುವ ಕೊರಗಜ್ಜನ ಸಾಕು ತಾಯಿ ಬೈರಕ್ಕೆ ಬೈಕಡ್ತಿ ಯ ದೇವಸ್ಥಾನವು ಉಡುಪಿ ಬಳಿ ಇದ್ದು, ಕೊರಗಜ್ಜ ಮತ್ತು ಸಾಕುತಾಯಿ ಬೈಕಡ್ತಿಯ ಸಂಬಂಧದ ಕುತೂಹಲಕಾರಿ ಅಂಶ ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ
"ಕೊರಗಜ್ಜ" ಸಿನಿಮಾದಲ್ಲಿ ಹಿರಿಯ ನಟಿ ಭವ್ಯ ಉದ್ಯಾವರ ಅರಸರನ್ನು ಎದುರುಹಾಕಿಕೊಳ್ಳುವ "ಪಂಜಂದಾಯಿ" ಎನ್ನುವ ರಾಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಪಾತ್ರಗಳು ರಣರಂಗದಲ್ಲಿ ಸಂಧಿಸುವ ರೋಚಕ ಘಟನೆಯನ್ನು ಐದು ಕ್ಯಾಮರಾಗಳಲ್ಲಿ ಚಿತ್ರೀಕರಿಸಲಾಗಿದೆ.
Koragajja Film Latest Update: "ಕೊರಗಜ್ಜ"ನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
Kari Haida Kari Ajja Movie : ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದ "ಕರಿ ಹೈದ ಕರಿ ಅಜ್ಜ". ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ.
ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.
ದಿ ಡಿವೈನ್ ಬ್ಲಾಕ್ಬ್ಲಸ್ಟರ್ ಕಾಂತಾರ ಎಂಬ ಅದ್ಭುತ ಸಿನಿಮಾದ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಪಂಚಕ್ಕೆ ತುಳುನಾಡಿನ ಕಾರಣಿಕ ಶಕ್ತಿಗಳ ದರ್ಶನ ಮಾಡಿಸಿದ್ದಾರೆ. ಅಲ್ಲದೆ, ಪಂಜುರ್ಲಿ ಮತ್ತು ಗುಳಿಗ ದೈವದ ಮಹಿಮೆಯನ್ನು ಜಗತ್ತಿಗೆ ಸಾರಿ ಹೇಳಿದ್ದಾರೆ. ಅದ್ರೆ, ರಿಷಬ್ ಮಾತ್ರ ಈ ಒಂದು ದೈವವನ್ನು ನಂಬಿ ಪ್ರತಿಯೊಂದು ಕಾರ್ಯವನ್ನು ನಡೆಸುತ್ತಾರೆ... ಅವರು ಏನೇ ಮಾಡಿದ್ರೂ ತಮ್ಮ ಇಷ್ಟ ದೇವರ ಅಪ್ಪಣೆ ಪಡಿತಾರೆ... ರಿಷಬ್ ನಂಬಿರುವ ಆ ದೈವ ಯಾವುದು ಗೊತ್ತೇ.. ಹಾಗಿದ್ರೆ ಈ ವರದಿ ಓದಿ.
ಸಾಗರ ಮೂಲದ ನಾಗಶ್ರೀ ಎಂಬವರ ನಾಲ್ಕು ತಿಂಗಳ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರದಿಂದ ಬಳಲಿ ನೋವು ಅನುಭವಿಸುತ್ತಿತ್ತು. ಹೀಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಡೆಸಿದಾಗ ಮಗುವಿಗೆ ಪಿಡ್ಸ್ ಇರುವುದಾಗಿ ತಿಳಿದುಬಂದಿತ್ತು. ಅಷ್ಟೇ ಅಲ್ಲದೆ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಕೆಎಂಸಿಗೆ ದಾಖಲಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.