ಸಿಎಂ ಡಿಸಿಎಂ ಪಕ್ಷದ ಆಂತರಿಕ ವಿಚಾರವಾಗಿ ದೆಹಲಿಗೆ ತೆರಳಿದ್ದಾರೆ
ಸಚಿವ ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಸಿಎಂ ಡಿಸಿಎಂಗೆ ಇದೆ
ಅವರು ಯಾವುದೇ ಪಟ್ಟಿ ಹಿಡಿದುಕೊಂಡು ದೆಹಲಿಗೆ ತೆರಳಿಲ್ಲ ಅದರ ಬಗ್ಗೆ ಅವರನ್ನೇ ಕೇಳಬೇಕು
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಮೊದಲಿಂದಲೂ ಚರ್ಚೆ ಇದೆ ಅದು ಹೊಸದೇನಲ್ಲ
ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈಬಗ್ಗೆ ಚರ್ಚೆ ಇದೆ
ಇತ್ತೀಚೆಗೆ ವರಿಷ್ಠರನ್ನು ಭೇಟಿಯಾಗಿರುವ ಸಚಿವ ಕೆ.ಎನ್. ರಾಜಣ್ಣ, ಸಮುದಾಯದ ಮಹತ್ವವನ್ನು ನೆನಪಿಸಿ, ಈ ಬಾರಿಯಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದ ಡಿಕೆಶಿ
ಕೆಪಿಸಿಸಿ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು
ಪಕ್ಷ ಸಂಘಟನೆ ಮತ್ತು ಕಾರ್ಯತಂತ್ರಗಳ ಬಗ್ಗೆ ಸಭೆ
ಕೆಪಿಸಿಸಿ ಪದಾಧಿಕಾರಿಗಳು, ನಿಗಮ ಮಂಡಳಿ ಅಧ್ಯಕ್ಷರು
ವಿಧಾಸಭೆ ಪರಾಜಿತ ಅಭ್ಯರ್ಥಿಗಳ ಜೊತೆ ಡಿಕೆಶಿ ಸಭೆ
Operation Congress : ಕಾಂಗ್ರೆಸ್ ಸೇರಲು ಹಲವಾರು ಬಿಜೆಪಿ ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ. ಹಲವು ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಬೆಳಗಾವಿ ಅಧಿವೇಶನ ಮುಗಿಯಲಿ ಎಂದು ಸಲೀಂ ಅಹ್ಮದ್ ಹೇಳಿದರು.
Kanakapura Assembly Constituency DK Shivakumar: 1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ ಎಂದು ರಾಣೇಬೆನ್ನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.
ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ ಮಾಡಿ ಆಹ್ವಾನ ನೀಡಿರೋ ವಿಚಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಿಜೆಪಿಯ 18 ಶಾಸಕರನ್ನು ಕರೆದುಕೊಂಡು ಹೋದರಲ್ಲಾ ಆಗ ಅವರ ನೈತಿಕತೆ ಎಲ್ಲಿಗೆ ಹೋಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಸಂವಿಧಾನದ ಹೆಸರಲ್ಲಿ ಪ್ರಮಾಣವಚನ ತೆಗೆದುಕೊಂಡವರು, ಭಾರತೀಯರನ್ನು ರಕ್ಷಣೆ ಮಾಡಬೇಕಾದವರು. ಈಗ ಜನರಿಗೆ ಮೊಸಮಾಡುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಕರಾಳ ದಿನ ಬರ್ತಾ ಇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಿನ್ನೆ ಕೂಡ ಗ್ಯಾಸ್ ಬೆಲೆ ಏರಿಸಿದ್ದಾರೆ. ಪದೇ ಪದೇ ಏರಿಕೆಯಾಗ್ತಾನೇ ಇದೆ. ಈಗ ಚುನಾವಣೆ ಇದೆ ಅಂತ ಮೋದಿ ಬರುತ್ತಿದ್ದಾರೆ. ಸಾವು, ಪ್ರವಾಹ ಆದಾಗ ರಾಜ್ಯಕ್ಕೆ ಬರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತ್ತೆ ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kiccha Sudeep entry into politics : ಕನ್ನಡ ಮಾತ್ರವಲ್ಲ ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ನಟ ಕಿಚ್ಚ ಸುದೀಪ್ ವಿಚಾರವಾಗಿ ಈ ಹಿಂದೆ ವದಂತಿಯೊಂದು ಹರಿದಾಡುತ್ತಿತ್ತು. ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಆಗ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿರಲಿಲ್ಲ.
ಬಿಜೆಪಿಗೆ ಕಮಿಷನ್ ಸರ್ಕಾರ ಎಂಬ ಬ್ರಾಂಡ್ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಿಂದ ಪರಿಶುದ್ಧವಾದ ಸರ್ಕಾರ ನೀಡಿದ್ದೀವಿ. ಇವತ್ತು ಪ್ರಧಾನಿಗೆ ಗುತ್ತಿಗೆದಾರರು ಪತ್ರ ಬರೆಯುತ್ತಿದ್ದಾರೆ. ವಿಧಾನಸೌಧದ ಗೋಡೆಗಳು ಕಾಸು ಕಾಸು ಎನ್ನುತ್ತಿವೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ನಡೆಸಿದ್ರು.
DK Shivakumar : ಎಲ್ಲ ಪಕ್ಷದರಿಗೂ,ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳು. ಎಲ್ಲ ಪಾರ್ಟಿಯವರಿಗೆ ಒಳ್ಳೆದಾಗಲಿ,ಅಧಿಕಾರ ಮಾತ್ರ ನಮಗೆ ಸಿಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ಅಧಿಕಾರದ ಆಸೆ ಬಿಚ್ಚಿಟ್ಟಿದ್ದಾರೆ.
ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ ವಿರೋಧಿಸುತ್ತದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನವರಿ 11 ರಿಂದ ಬಸ್ ಯಾತ್ರೆ ಆರಂಭಗೊಳ್ಳಲಿದೆ. ಬೆಳಗಾವಿ ಸೇರಿ ಒಟ್ಟು 21 ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಸಂಚಾರ ಮಾಡಲಿದೆ. ಜಂಟಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.