ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.ಭಾರತೀಯ ನ್ಯಾಯಾಂಗ ವ್ಯವಸ್ಥೆಯು ವಿಶ್ವದ ಅತ್ಯಂತ ಹಳೆಯ ಮತ್ತು ಬಲಿಷ್ಠ ವ್ಯವಸ್ಥೆಯಾಗಿದೆ.ಅದನ್ನು ಇನ್ನಷ್ಟು ಶಕ್ತಿಯುತಗೊಳಿಸುವ ತುರ್ತು ಅಗತ್ಯವಿದೆ.ಕಾನೂನು ಪದವೀಧರರು ಈ ನಿಟ್ಟಿನಲ್ಲಿ ದೃಢ ಹೆಜ್ಜೆಗಳನ್ನು ಇಡಬೇಕು.ಕಡಿಮೆ ವೆಚ್ಚ ,ತ್ವರಿತ ಗತಿಯಲ್ಲಿ ನ್ಯಾಯದಾನವಾಗಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ (Thawar Chand Gehlot) ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಪ್ರಸ್ತುತ ಕುಲಪತಿ ಈಶ್ವರ ಭಟ್ ಅವರು ವಯೋಮಿತಿ ಮೀರಿದ್ದರೂ ಅವರು ಆ ಹುದ್ದೆಯಲ್ಲಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಅವರನ್ನು ಕುಲಪತಿ ಹುದ್ದೆಯಿಂದ ಪದಚ್ಯುತಗೊಳಿಸುವಂತೆ ಕೋರಿ ಕಾನೂನು ವಿದ್ಯಾರ್ಥಿಗಳ ಸಂಘ ಹೈಕೋರ್ಟ್ ಮೊರೆ ಹೋಗಿದೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಏಕಾಏಕಿ ಆಫ್ಲೈನ್ ಪರೀಕ್ಷೆಯನ್ನು ನಡೆಸಲು ಮುಂದಾಗಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಸೋಮವಾರದಂದು ಸುವರ್ಣ ವಿಧಾನಸೌಧ ಚಲೋ ಹೋರಾಟಕ್ಕೆ ಮುಂದಾಗಿದ್ದಾರೆ.
ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ ) ಆರಂಭವಾಗಬೇಕಾಗಿದ್ದ ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ರಾಜ್ಯದ COVID-19 ಲಾಕ್ಡೌನ್ ಪರಿಸ್ಥಿತಿಯಿಂದಾಗಿ ಸೆಪ್ಟೆಂಬರ್ 21, 2020 ರಿಂದ ನಡೆಸಲು ನಿರ್ಧರಿಸಲಾದ ಪರೀಕ್ಷೆಗಳನ್ನು ಮತ್ತಷ್ಟು ಮುಂದೂಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.