ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.ಭಾರತೀಯ ನ್ಯಾಯಾಂಗ ವ್ಯವಸ್ಥೆಯು ವಿಶ್ವದ ಅತ್ಯಂತ ಹಳೆಯ ಮತ್ತು ಬಲಿಷ್ಠ ವ್ಯವಸ್ಥೆಯಾಗಿದೆ.ಅದನ್ನು ಇನ್ನಷ್ಟು ಶಕ್ತಿಯುತಗೊಳಿಸುವ ತುರ್ತು ಅಗತ್ಯವಿದೆ.ಕಾನೂನು ಪದವೀಧರರು ಈ ನಿಟ್ಟಿನಲ್ಲಿ ದೃಢ ಹೆಜ್ಜೆಗಳನ್ನು ಇಡಬೇಕು.ಕಡಿಮೆ ವೆಚ್ಚ ,ತ್ವರಿತ ಗತಿಯಲ್ಲಿ ನ್ಯಾಯದಾನವಾಗಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ (Thawar Chand Gehlot) ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಏಕಾಏಕಿ ಆಫ್ಲೈನ್ ಪರೀಕ್ಷೆಯನ್ನು ನಡೆಸಲು ಮುಂದಾಗಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಸೋಮವಾರದಂದು ಸುವರ್ಣ ವಿಧಾನಸೌಧ ಚಲೋ ಹೋರಾಟಕ್ಕೆ ಮುಂದಾಗಿದ್ದಾರೆ.
ಆಫ್ಲೈನ್ ಮಾದರಿಯಲ್ಲಿ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.