KVS Recruitment 2022: ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರೀಯ ವಿದ್ಯಾಲಯದಲ್ಲಿ 13,000 ಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಇಂದಿನಿಂದ (ಡಿಸೆಂಬರ್ 05) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 26 ಡಿಸೆಂಬರ್ 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಬೋಧನೆ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಪ್ರಕ್ರಿಯೆ ಮೂಲಕ PRT, TGT, PGT ಮತ್ತು ಇತರ ಹುದ್ದೆಗಳು ಸೇರಿ ಒಟ್ಟು 13404 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಟಿಜಿಟಿಗಳು, ಪಿಜಿಟಿಗಳು, ಹೆಡ್ ಮಾಸ್ಟರ್ಗಳು, ಸೆಕ್ಷನ್ ಆಫೀಸರ್ಗಳು, ಪ್ರಾಂಶುಪಾಲರು ಮತ್ತು ಇತರ ಹುದ್ದೆಗಳನ್ನು ಲಿಮಿಟೆಡ್ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಎಲ್ಡಿಸಿಇ) 2022 ಮೂಲಕ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.