2024-25ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ-ಶಿವಮೊಗ್ಗ, ಕೃಷಿ ವಿಶ್ವವಿದ್ಯಾಲಯ-ಬೆಂಗಳೂರು ಮತ್ತು ಧಾರವಾಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ-ಬಾಗಲಕೋಟೆ ಈ ಐದು ಕಾಲೇಜುಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000 ರೂ. ಗಳನ್ನು ಶಿಶ್ಯವೇತನ ನೀಡಲಾಗುವುದು
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರಕ್ಷಣಾ ಸಚಿವಾಲಯದ ಡೈರೆಕ್ಟರ್ ಜನರಲ್ ರಿಸೆಟ್ಲಮೆಂಟ್ (ಡಿಜಿಆರ್), ಮಾಜಿ ಯೋಧರಿಗಾಗಿ 2024ರ ಜುಲೈ 19ರಂದು ಜಾಲಹಳ್ಳಿಯ ವಾಯುಪಡೆ ನಿಲ್ದಾಣ(ಎಂಟಿ ಕಾಂಪ್ಲೆಕ್ಸ್), ಜಾಲಹಳ್ಳಿ ಪೂರ್ವ (ಸಿಟಿಐ ಸಮೀಪ) ಉದ್ಯೋಗ ಮೇಳವನ್ನು ಆಯೋಜಿಸಿದೆ.ನಿವೃತ್ತ ಯೋಧರಿಗೆ ಎರಡನೇ ಅವಕಾಶವನ್ನು ಕಲ್ಪಿಸಲು ಉದ್ಯೋಗ ಬಯಸುವವರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಕಲ್ಪಿಸುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಡಿ “ಶಕ್ತಿ ಸದನ” ಪೋಷಣ ಅಭಿಯಾನ, ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದಲ್ಲಿರುವ, ಸಮುದಾಯ ವಿಜ್ಞಾನ ಮಹಾವಿದ್ಯಾಲಯದ, ಕುಟುಂಬ ವಿಭಾಗದಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕ, ಕಾರ್ಯಕ್ರಮ ಅಧಿಕಾರಿ, ಕಾರ್ಯಕ್ರಮ ನಿರ್ವಾಹಕರು ಮತ್ತು ಹಿರಿಯ ಕಾರ್ಯಕ್ರಮ ಅಧಿಕಾರಿ ಸೇರಿ ತಾತ್ಕಾಲಿಕ 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಸತಿಯುತ ಜೆಇಇ, ನೀಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.