ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆ ಆದ್ರೆ ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಹಿಟ್ ಅಂಡ್ ರನ್ಗೆ 10 ವರ್ಷ ಜೈಲು, ಏಳು ಲಕ್ಷ ದಂಡದ ನಿಯಮ
ಕರಾಳ ಶಾಸನ ವಾಪಸ್ ಪಡೆಯಲು ಲಾರಿ ಓನರ್ಸ್ಗಳಿಂದ ಆಗ್ರಹ
ದಕ್ಷಿಣ ಭಾರತದ ಲಾರಿ ಅಸೋಸಿಯೇಷನ್ನಿಂದ ಮುಷ್ಕರಕ್ಕೆ ಕರೆ
ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಸಹಯೋಗ
ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು. ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಜತೆ ಸಿಎಂ ಸಭೆ. ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳವಂತೆ ಹೇಳಿದ್ದೇನೆ. ಅಧಿಕಾರಿಗಳು ಮುಖ್ಯಸ್ಥರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆ ಮುಗಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗಂಡ ಜಗಳವಾಡಿದಾಗ ಹೆಂಡತಿ ಅಳುತ್ತಾ ಕೂರಬೇಕಾಗಿಲ್ಲ. ಪತಿಯಿಂದ ದೂರ ಇರುತ್ತೀರಾ ಎಂದರೆ ಹೆಣ್ಣು ಮಕ್ಕಳು ತವರಿಗೆ ಹೋಗಬೇಕಾಗಿಲ್ಲ. ನಿಮಗೂ ಕಾನೂನಿನಲ್ಲಿ ರಕ್ಷಣೆಯಿದೆ. ಕಾನೂನು, ನಿಮ್ಮ ಹಕ್ಕು ತಿಳಿದರೆ ನೀವು ನ್ಯಾಯಕ್ಕೆ ಹೋರಾಡಬಹುದು. ಮಹಿಳೆ ಮೇಲೆ ದೌರ್ಜನ್ಯವಾಗುತ್ತಿದ್ದರೆ ಆಕೆ ಕಾನೂನಿನ ನೆರವು ಪಡೆದು ನ್ಯಾಯಕ್ಕಾಗಿ ಹೋರಾಡಬಹುದು. ಈ ಬಗ್ಗೆ ಮಹಿಳೆಗೆ ಕಾನೂನಿನ ಬಗ್ಗೆ ಸ್ವಲ್ಪ ಮಟ್ಟಿಗೆ ಜ್ಞಾನವಿರಬೇಕು. ಕುಟುಂಬದಲ್ಲಿ ಜಗಳವಾದರೆ ಮಹಿಳೆ ಯಾವೆಲ್ಲ ಕಾನೂನಿನ ನೆರವು ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ ನೋಡಿ.
ನಾನು ಕನ್ನಡ ಪರ ಇದ್ದೇನೆ. ಕನ್ನಡವನ್ನು ಬೆಳೆಸೋದ್ದಕ್ಕೆ ಸರ್ಕಾರ ಬದ್ದವಾಗಿದೆ. ಇದರಲ್ಲಿ ಯಾವ ಕಾರಣಕ್ಕೂ ರಾಜೀಯೇ ಇಲ್ಲ. ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕೀಯ ಮೀರಿ ನಿರ್ಧಾರ ಮಾಡುತ್ತೇವೆ- ಸಿಎಂ ಬೊಮ್ಮಾಯಿ
ಹೈಕೋರ್ಟ್ (Highcourt) ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಮುಂಜಾನೆ ಹಾಗೂ ರಾತ್ರಿ ಅವಧಿಯಲ್ಲಿ ಮೈಕ್ ಬಳಸುತ್ತಿರವವರಿಗೆ 200 ಕ್ಕಿಂತ ಹೆಚ್ಚು ಮಂದಿಗೆ ನೊಟೀಸ್ ನೀಡಲಾಗಿದೆ. ಆದಾಗ್ಯೂ ಕಾನೂನು ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು 03 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿಗಾಗಿ ಬೀದರ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ಮತ್ತು 2 ವರ್ಷ ನ್ಯಾಯಾಂಗ ತರಬೇತಿಗಾಗಿ ಸದರಿ ಯೋಜನೆಯ ಸರಳೀಕರಣ ಹಾಗೂ ಶಿಷ್ಯವೇತನ ತ್ವರಿತಮಂಜೂರಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇಲಾಖೆಯ ತಂತ್ರಾAಶವನ್ನು ಸಿದ್ಧಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.